ಸಮಂತಾ ವಿಜಯ್ ದೇವರಕೊಂಡ ಜೊತೆ ಖುಷಿ ಸಿನಿಮಾ ಮಾಡುತ್ತಿದ್ದಾರೆ. ಶಿವನಿರ್ವಾಣ ನಿರ್ದೇಶನದಲ್ಲಿ ಈ ಸಿನಿಮಾ ತಯಾರಾಗುತ್ತಿದೆ. ಈ ಹಿಂದೆ ವಿಜಯ್ ದೇವರಕೊಂಡ ಮತ್ತು ಸಮಂತಾ ಮಹಾನಟಿ ಚಿತ್ರದಲ್ಲಿ ಒಟ್ಟಿಗೆ ನಟಿಸಿದ್ದರು. ಈಗ ಅದೇ ಜೋಡಿ ಮತ್ತೆ ಖುಷಿ ಚಿತ್ರದ ಮೂಲಕ ಒಂದಾಗಿದೆ. ಇದೊಂದು ಫೀಲ್ ಗುಡ್ ಲವ್ ಸ್ಟೋರಿ ಆಗಿದ್ದು, ತೆಲುಗು ಪ್ರೇಕ್ಷಕರಲ್ಲಿ ಒಂದು ರೀತಿಯ ಕ್ಯೂರಿಯಾಸಿಟಿ ಮೂಡಿಸಿದೆ.