ಈ ಒಂದು ಬೆಳವಣಿಗೆ ಬಗ್ಗೆ ಚೇತನ್ ಅವರು ಪ್ರತಿಕ್ರಿಯಿಸಿದ್ದಾರೆ. ವಿವಾದಾತ್ಮಕ ಚಿತ್ರ 'ದಿ ಕೇರಳ ಸ್ಟೋರಿ' ಮೇ 5 ರಂದು ತೆರೆಗೆ ಬರಲಿದೆ. ನಾನು ಈ ಹಿಂದೆ ಸಮುದಾಯದ/ಲಿಂಗದ ವಿರುದ್ಧ ದ್ವೇಷ ಮತ್ತು ಅವಹೇಳನ ಮಾಡುವ ಚಲನಚಿತ್ರಗಳಲ್ಲಿ ನಟಿಸಲು ನಿರಾಕರಿಸಿದ್ದೆ. ಆದರೆ, ಸೈದ್ಧಾಂತಿಕ ಆಧಾರದ ಮೇಲೆ ಸೆನ್ಸಾರ್ ಮಂಡಳಿಯಿಂದ ಅನುಮತಿ ಪಡೆದ ಚಲನಚಿತ್ರವನ್ನು ರಾಜ್ಯವು ನಿಷೇಧಿಸಬೇಕು ಎಂದು ಹೇಳುವುದನ್ನು ನಾನು ಒಪ್ಪುವುದಿಲ್ಲ. ನಮಗೆ ಅಭಿವ್ಯಕ್ತಿ ಸ್ವಾತಂತ್ರ್ಯ ಅತ್ಯಗತ್ಯ ಎಂದು ನಟ ಚೇತನ್ ಅವರು ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ.