PHOTOS: ಬಳ್ಳಾರಿಯ ಕನಕ ದುರ್ಗಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

ಸ್ಯಾಂಡಲ್​​​ವುಡ್ ನ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಇಂದು ಬಳ್ಳಾರಿ ಕನಕ ದುರ್ಗಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು. ನೆಚ್ಚಿನ ನಟನನ್ನು ನೋಡಲು ಅಭಿಮಾನಿಗಳು ಮುಗಿಬಿದ್ದರು. ಅಭಿಮಾನಿಗಳನ್ನು ಚದುರಿಸಲು ಪೊಲೀಸರು ಹರಸಾಹಸಪಟ್ಟರು. ಪೊಗರು ನಂದಕಿಶೋರ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಸಿನಿಮಾ. ಧ್ರುವ ಸರ್ಜಾಗೆ ನಾಯಕಿಯಾಗಿ ರಶ್ಮಿಕಾ ಮಂದಣ್ಣ ಕಾಣಿಸಿಕೊಳ್ಳುತ್ತಿದ್ದಾರೆ. ಹ್ಯಾಟ್ರಿಕ್ ಹಿಟ್ ನೀಡಿರುವ ಧ್ರುವ ಈಗ ಮತ್ತೊಂದು ಹಿಟ್ ಸಿನಿಮಾಗಾಗಿ ಖಾದಾಡುತ್ತಿದ್ದಾರೆ. ಕಳೆದ 15 ದಿನಗಳಿಂದ ಪೊಗರು ಚಿತ್ರತಂಡ ಬಳ್ಳಾರಿಯಲ್ಲಿ ಚಿತ್ರೀಕರಣ ಮಾಡುತ್ತಿದೆ.

First published: