ನಟಿ ಅಮೂಲ್ಯ ಜಗದೀಶ್ ಅವರು ಸದ್ಯ ಕುಟುಂಬದ ಜೊತೆ ಕಾಲ ಕಳೆಯುತ್ತಿದ್ದಾರೆ. ಅವಳಿ ಮಕ್ಕಳ ಲಾಲನೆ ಪಾಲನೆಯಲ್ಲಿ ಬ್ಯುಸಿ ಆಗಿದ್ದಾರೆ. ನಟಿ ಅಮೂಲ್ಯ ಜಗದೀಶ್ ಕುಟುಂಬ ದೊಡ್ಡಬಳ್ಳಾಪುರದ ಘಾಟಿ ಸುಬ್ರಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ, ಸ್ವಾಮಿಯ ದರ್ಶನ ಪಡೆದಿದ್ದಾರೆ. ಇಬ್ಬರು ಮಕ್ಕಳೊಂದಿಗೆ ಹೋಗಿ ಸುಬ್ರಮಣ್ಯ ಸ್ವಾಮಿಯ ಆಶೀರ್ವಾದ ಪಡೆದಿದ್ದಾರೆ. ಮಕ್ಕಳಿಗೆ ಒಳ್ಳೆಯದಾಗಲಿ, ಆರೋಗ್ಯ ಕರುಣಿಸು ಎಂದು ಬೇಡಿಕೊಂಡಿದ್ದಾರೆ. ನಟಿ ಅಮೂಲ್ಯ ಮತ್ತು ಜಗದೀಶ್ ಅವರು ತಮ್ಮ ಅವಳಿ ಗಂಡು ಮಕ್ಕಳಿಗೆ ಅಥರ್ವ್ ಮತ್ತು ಆಧವ್ ಎಂದು ಹೆಸರು ಇಟ್ಟಿದ್ದಾರೆ. ಅ ಅಕ್ಷರದಿಂದಲೇ ಹೆಸರಿಟ್ಟಿದ್ದಾರೆ. ಅವಳಿ ಮಕ್ಕಳ ಲಾಲನೆ ಪಾಲನೆಯಲ್ಲಿ ಅಮೂಲ್ಯ ಅವರು ಸದ್ಯ ಬ್ಯುಸಿ ಇದ್ದಾರೆ. ಮುದ್ದು ಮಕ್ಕಳನ್ನು ಸಾಕುತ್ತಾ, ಸಾಮಾಜಿಕ ಜಾಲತಾಣದಲ್ಲಿ ತಮ್ಮ ಖುಷಿಯನ್ನು ಹಂಚಿಕೊಳ್ತಾರೆ. ಇತ್ತಿಚೇಗೆ ಸಾಲು ಮರದ ತಿಮ್ಮಕ್ಕ ಅಮೂಲ್ಯ ಜಗದೀಶ್ ಅವರ ಮನೆಗೆ ಭೇಟಿ ನೀಡಿ ಮಕ್ಕಳಿಗೆ ಆಶೀರ್ವಾದ ಮಾಡಿ ಬಂದಿದ್ದರು. ಎಲ್ಲರೂ ಖುಷಿ ಆಗಿದ್ದರು. ತಿರುಪತಿ ತಿಮ್ಮಪ್ಪನಿಗೆ ಅಮೂಲ್ಯ ಜಗದೀಶ್ ಅವರು ತಮ್ಮ ಮಕ್ಕಳ ಕೂದಲನ್ನು ಅರ್ಪಿಸಿದ್ದರು. ಮಕ್ಕಳು ಮುದ್ದಾಗಿದ್ದಾರೆ. ಸಿನಿಮಾದಿಂದ ದೂರ ಉಳಿದಿರುವ ಅಮೂಲ್ಯ ಅವರು ಮತ್ತೆ ಸಿನಿಮಾ ಮಾಡಬೇಕು ಎಂದು ಅಭಿಮಾನಿಗಳು ಕೇಳ್ತಾ ಇದ್ದಾರೆ. ಅಮೂಲ್ಯರನ್ನು ತೆರೆ ಮೇಲೆ ನೋಡಲು ಕಾಯ್ತಾ ಇದ್ದಾರೆ.