Amulya: ತುಂಬು ಗರ್ಭಿಣಿ ಅಮೂಲ್ಯ ಈಗ ಹೇಗಿದ್ದಾರೆ ಗೊತ್ತಾ? ಸಖತ್ ಕ್ಯೂಟ್ ಫೋಟೋಗಳು ಇಲ್ಲಿವೆ..
ಇದೀಗ ತುಂಬು ಗರ್ಭಿಣಿಯಾಗಿರುವ ನಟಿ ಅಮೂಲ್ಯ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಫೋಟೋದಲ್ಲಿ ಅಮೂಲ್ಯ ತುಂಬಾ ಮುದ್ದಾಗಿ ಕಾಣುತ್ತಿದ್ದಾರೆ.
ಕೆಲ ದಿನಗಳ ಹಿಂದೆ ಸ್ಯಾಂಡಲ್ವುಡ್ ನಟಿ ಅಮೂಲ್ಯ ಜಗದೀಶ್ ಅವರು ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದರು. ಹೌದು, ನಟಿ ಅಮೂಲ್ಯ ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ ಎಂಬ ವಿಚಾರ ಎಲ್ಲರಿಗೂ ತಿಳಿದಿದೆ. (ಕೃಪೆ: ಅಮೂಲ್ಯ ಇನ್ಸ್ಟಾಗ್ರಾಮ್)
2/ 7
ಇದೀಗ ತುಂಬು ಗರ್ಭಿಣಿಯಾಗಿರುವ ನಟಿ ಅಮೂಲ್ಯ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಫೋಟೋದಲ್ಲಿ ಅಮೂಲ್ಯ ತುಂಬಾ ಮುದ್ದಾಗಿ ಕಾಣುತ್ತಿದ್ದಾರೆ.(ಕೃಪೆ: ಅಮೂಲ್ಯ ಇನ್ಸ್ಟಾಗ್ರಾಮ್)
3/ 7
ತಾವು ತಾಯಿಯಾಗುತ್ತಿರುವ ವಿಚಾರವನ್ನು ಸ್ವತಃ ಅಮೂಲ್ಯ ಅವರೇ ತಿಳಿಸಿದ್ದರು. ಪತಿ ಜಗದೀಶ್ ಜೊತೆಗೆ ಇರುವ ಒಂದು ವಿಶೇಷ ಫೋಟೋವನ್ನು ಹಂಚಿಕೊಂಡು ‘ಸದ್ಯ ನಾವು ಈಗ ಇಬ್ಬರಲ್ಲ. 2022ರಲ್ಲಿ ಮೂವರಾಗುತ್ತಿದ್ದೇವೆ’ ಎಂದು ಬರೆದುಕೊಂಡಿದ್ದರು. (ಕೃಪೆ: ಅಮೂಲ್ಯ ಇನ್ಸ್ಟಾಗ್ರಾಮ್)
4/ 7
ಬಾಲನಟಿಯಾಗಿಯೇ ಚಿತ್ರರಂಗಕ್ಕೆ ಕಾಲಿಟ್ಟ ಅಮೂಲ್ಯ ಅವರು ‘ಚೆಲುವಿನ ಚಿತ್ತಾರ’ ಸಿನಿಮಾ ಮೂಲಕ ಹೀರೋಯಿನ್ ಆಗಿ ಚಿರಪರಿಚಿತರಾದರು. ಚಿಕ್ಕ ವಯಸ್ಸಿನಲ್ಲಿಯೇ ಸ್ಟಾರ್ ನಟರೊಂದಿಗೆ ಅಭಿನಯಿಸಿದ ಕೀರ್ತಿ ಇವರದ್ದಾಗಿದೆ.(ಕೃಪೆ: ಅಮೂಲ್ಯ ಇನ್ಸ್ಟಾಗ್ರಾಮ್)
5/ 7
ಇತ್ತ ಚಿತ್ರರಂಗದಲ್ಲಿ ಬೇಡಿಕೆ ಇರುವಾಗಲೇ 2017ರಲ್ಲಿ ರಾಜಕೀಯ ಹಿನ್ನೆಲೆ ಇರುವ ಕುಟುಂಬದ ಜಗದೀಶ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸದ್ಯ ಈ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದೆ. (ಕೃಪೆ: ಅಮೂಲ್ಯ ಇನ್ಸ್ಟಾಗ್ರಾಮ್)
6/ 7
ಕನ್ನಡದ ಹಲವಾರು ಸಿನಿಮಾಗಳಲ್ಲಿ ಅಮೂಲ್ಯ ನಟಿಸಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಯಾವುದೇ ಹೊಸ ಚಿತ್ರಗಳನ್ನು ಒಪ್ಪಿಕೊಳ್ಳುತ್ತಿರಲಿಲ್ಲ. ಈ ಮೂಲಕ ಅವರು ಸಂಸಾರದ ಕಡೆಗೆ ಅವರು ಹೆಚ್ಚು ಗಮನ ನೀಡಿದ್ದಾರೆ. ಈಗ ಅವರು ತಾಯಿ ಆಗುತ್ತಿರುವ ಸುದ್ದಿ ಕೇಳಿ ಅಭಿಮಾನಿಳು ಸಂತಸ ವ್ಯಕ್ತಪಡಿಸಿದ್ದಾರೆ.(ಕೃಪೆ: ಅಮೂಲ್ಯ ಇನ್ಸ್ಟಾಗ್ರಾಮ್)
7/ 7
ವಿಭಿನ್ನವಾಗಿ ಫೋಟೋ ಶೂಟ್ ಮಾಡಿಸಿರೋ ಅಮೂಲ್ಯ, ತಮ್ಮ ಕ್ಯೂಟ್ ಬೇಬಿ ಬಂಪ್ ತೋರಿಸಿದ್ದಾರೆ. ಈ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.(ಕೃಪೆ: ಅಮೂಲ್ಯ ಇನ್ಸ್ಟಾಗ್ರಾಮ್)