Shilpa Shetty-Raj Kundra: ಅಶ್ಲೀಲ ಚಿತ್ರ ನಿರ್ಮಾಣ: ಶಿಲ್ಪಾ ಶೆಟ್ಟಿ ಗಂಡ ರಾಜ್ ಕುಂದ್ರಾ ಬಂಧನ..! ನೀಲಿ ಚಿತ್ರಗಳನ್ನು ನಿರ್ಮಿಸಿದ ಆರೋಪದ ಮೇಲೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ಹಾಗೂ ಉದ್ಯಮಿ ರಾಜ್ ಕುಂದ್ರಾ ಅವರನ್ನು ಮುಂಬೈ ಅಪರಾಧ ದಳದ ಪೊಲೀಸರು ಬಂಧಿಸಿದ್ದಾರೆ. (ಚಿತ್ರಗಳು ಕೃಪೆ: ಇನ್ಸ್ಟಾಗ್ರಾಂ ಖಾತೆ)
1 / 9
ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಅವರನ್ನು ಮುಂಬೈ ಕ್ರೈಂ ಬ್ರ್ಯಾಂಚ್ ಪೊಲೀಸರು ಬಂಧಿಸಿದ್ದಾರೆ.
2 / 9
ರಾಜ್ ಕುಂದ್ರಾ ಅವರನ್ನು ಅಶ್ಲೀಲ ಚಿತ್ರಗಳ ನಿರ್ಮಾಣದ ಆರೋಪದ ಮೇಲೆ ಬಂಧಿಸಲಾಗಿದೆ.
3 / 9
ಕಳೆದ ಫೆಬ್ರವರಿಯಲ್ಲಿ ಅಶ್ಲೀಲ ಚಿತ್ರಗಳನ್ನು ನಿರ್ಮಿಸಿ, ಮೊಬೈಲ್ ಅಪ್ಲಿಕೇಶನ್ನಲ್ಲಿ ಅಪ್ಲೋಡ್ ಮಾಡಿದರವ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
4 / 9
ಈ ಪ್ರಕರಣದಲ್ಲಿ ರಾಜ್ ಕುಂದ್ರಾ ಅವರನ್ನು ಬಂಧಿಸಲಾಗಿದ್ದು, ರಾಜ್ ಈ ಪ್ರಕರಣದಲ್ಲಿ ಪ್ರಮುಖ ಸಂಚುಕೋರ ವ್ಯಕ್ತಿಯಾಗಿದ್ದಾರೆ ಎನ್ನಲಾಗಿದೆ.
5 / 9
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಸಾಕಷ್ಟು ಸಾಕ್ಷ್ಯಗಳು ಸಿಕ್ಕಿವೆಯಂತೆ. ಅವುಗಳ ಆಧಾರದ ಮೇಲೆಯೇ ಅವರನ್ನು ಬಂಧಿಸಲಾಗಿದೆಯಂತೆ.
6 / 9
ಜುಲೈ 19ರಂದು ಮಧ್ಯಾಹ್ನವೇ ಶಿಲ್ಪಾ ಶೆಟ್ಟಿ ಅವರ ನಿವಾಸದಲ್ಲಿ ಮುಂಬೈ ಕ್ರೈಂ ಬ್ರ್ಯಾಂಚ್ ಪೊಲೀಸರು ಭೇಟಿ ಕೊಟ್ಟು ವಿಚಾರಣೆ ನಡೆಸಿದ್ದರಂತೆ.
7 / 9
ವಿಚಾರಣೆ ನಂತರ ರಾಜ್ ಕುಂದ್ರಾ ಅವರನ್ನು ಬಂಧಿಸಿದ್ದು, ತನಿಖೆ ಮುಂದುವರೆಸುತ್ತಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
8 / 9
ರಾಜ್ ಕುಂದ್ರಾ ಈ ಹಿಂದೆ ತಮ್ಮ ವಿಚ್ಛೇದಿತ ಪತ್ನಿಯ ಬಗ್ಗೆ ಮಾತನಾಡುವ ಮೂಲಕ ಸುದ್ದಿಯಲ್ಲಿದ್ದರು.
9 / 9
ಈ ಹಿಂದೆ ರಾಜ್ ಕುಂದ್ರಾ ಮೇಲೆ ವಂಚನೆ ಪ್ರಕರಣ ಸಹ ದಾಖಲಾಗಿತ್ತು.
First published: July 21, 2021, 22:08 IST