ಸದ್ಯ, ಕೆಜಿಎಫ್ ಚಿತ್ರ ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶನ ಮಾಡ್ತಿರುವ 'ಸಾಲಾರ್' ಚಿತ್ರದಲ್ಲಿ ಶ್ರುತಿ ಹಾಸನ್ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ನಟ ಪ್ರಭಾಸ್ ಜೊತೆ ಶ್ರುತಿ ಹಾಸನ್ ನಟಿಸಿದ್ದಾರೆ. ಕಳೆದ ತಿಂಗಳ ಕೊನೆಯಲ್ಲಿ, ಶ್ರುತಿ ಹಾಸನ್ ಅವರು ಸಲಾರ್ನಲ್ಲಿನ ತಮ್ಮ ದೃಶ್ಯಗಳ ಚಿತ್ರೀಕರಣ ಪೂರ್ಣಗೊಂಡಿದೆ ಎಂದು ಸೋಶಿಯಲ್ ಮೀಡಿಯಾ ಮೂಲಕ ತಿಳಿಸಿದ್ರು.
ನಿನ್ನೆ (ಮಾರ್ಚ್ 16) ನಟಿ ಶ್ರುತಿ ಹಾಸನ್ Instagram ನಲ್ಲಿ ಅಭಿಮಾನಿಗಳಿಗೆ ಸಿಕ್ಕಿದ್ದಾರೆ. ಅಷ್ಟೇ ಅಲ್ಲದೇ ವಿಭಿನ್ನ ಪ್ರಶ್ನೆಗಳನ್ನು ಕೇಳಲು ಅಭಿಮಾನಿಗಳನ್ನು ಹೇಳಿದ್ದಾರೆ. ಸಿಲ್ಲಿ ಪ್ರಶ್ನೆ ಕೇಳಿ ಎಂದಿದ್ರು. ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕ ನಟಿ ಶ್ರುತಿ ಹಾಸನ್ಗೆ ಚಿತ್ರ-ವಿಚಿತ್ರ ಪ್ರಶ್ನೆಗಳನ್ನೇ ಕೇಳಿದ್ದಾರೆ. ಹಲವು ಪ್ರಶ್ನೆಗಳಿಗೆ ಶ್ರುತಿ ಹಾಸನ್ ಕೂಲ್ ಆಗಿ ಉತ್ತರಿಸಿದ್ದಾರೆ.