ಅಗ್ನಿಸಾಕ್ಷಿ ಖ್ಯಾತಿಯ ಕಿರುತೆರೆ ನಟಿ, ಬಿಗ್ಬಾಸ್ ಮಾಜಿ ಸ್ಪರ್ಧಿ ವೈಷ್ಣವಿ ಗೌಡ ನಿಶ್ಚಿತಾರ್ಥ ವಿಷಯವಾಗಿ ಕಳೆದ ಮೂರ್ನಾಲ್ಕು ದಿನಗಳಿಂದ ಸುದ್ದಿಯಲ್ಲಿದ್ದಾರೆ. ವೈಷ್ಣವಿ ಅವರು ಉದ್ಯಮಿ ವಿದ್ಯಾಭರಣ್ ಜೊತೆ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ ಎನ್ನಲಾದ ಫೋಟೋವೊಂದು ವೈರಲ್ ಆಗಿತ್ತು. ಬಳಿಕ ಕಾರಣಾಂತರಗಳಿಂದ ಆ ಸಂಬಂಧ ಮುರಿದು ಬಿದ್ದಿದೆ. ಈಗ ವೈಷ್ಣವಿಗೌಡ ಸ್ವಲ್ಪ ರಿಲ್ಯಾಕ್ಸ್ ಮೂಡ್ನಲ್ಲಿದ್ದಾರೆ. ಕೆಲವೇ ದಿನಗಳಲ್ಲಿ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿರುವ ಸೀತಾರಾಮ ಧಾರಾವಾಹಿಯಲ್ಲಿ ಮುಖ್ಯ ಭೂಮಿಕೆಯಲ್ಲಿ ನಟಿಸಲಿದ್ದಾರೆ.