ಕನ್ನಡ ಕಿರುತೆರೆಯಲ್ಲಿ ಮನರಂಜನೆಗೆ ಹೊಸ ಮುನ್ನುಡಿ ಬರೆದ ಸ್ಟಾರ್ ಸುವರ್ಣ ವಾಹಿನಿಯು ಇದೀಗ ಹೊಸತನದೊಂದಿಗೆ ವಿಭಿನ್ನ ಕಥಾ ಹಂದರವುಳ್ಳ ಧಾರಾವಾಹಿಗಳನ್ನು ನೀಡುತ್ತಾ ಬರುತ್ತಿದೆ. ಇತ್ತೀಚೆಗಷ್ಟೇ ಶುರುವಾದ 'ನಮ್ಮ ಲಚ್ಚಿ' ಹಾಗೂ 'ರಾಣಿ' ಧಾರಾವಾಹಿಗಳು ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಗಿದ್ದು, ಇದೀಗ 'ನೀನಾದೆ ನಾ' ಎಂಬ ಹೊಸ ಧಾರಾವಾಹಿಯನ್ನು ಪ್ರಸಾರಮಾಡಲು ಸಜ್ಜಾಗಿದೆ.