'ವೀರಮಹಾದೇವಿ' ಚಿತ್ರದ ಪೋಸ್ಟರ್ ಸುಡುವಂತಹ ಯಾವ ಕೆಲಸ ಮಾಡಿದ್ದಾರೆ ಸನ್ನಿ ಲಿಯೋನ್?
'ವೀರಮಹಾದೇವಿ' ಐದು ಭಾಷೆಗಳಲ್ಲಿ ತೆರೆಕಾಣಲಿರುವ ಸಿನಿಮಾ. ತಮಿಳಿನಲ್ಲಿ ನಿರ್ಮಾಣವಾಗುತ್ತಿರುವ ಈ ಸಿನಿಮಾದಲ್ಲಿ ಮಾಜಿ ನೀಲಿ ತಾರೆ ಸನ್ನಿ ಲಿಯೋನ್ ಅಭಿನಯಿಸುತ್ತಿದ್ದಾರೆ. ದಕ್ಷಿಣ ಭಾರತದಲ್ಲಿ ನಾಯಕಿಯಾಗಿ ಸನ್ನಿ ಇದೇ ಮೊದಲು ಈ ಸಿನಿಮಾದ ಮೂಲಕ ಕಾಣಿಸಿಕೊಳ್ಳಲಿದ್ದಾರೆ. ತಮಿಳಿನ ಈ ಸಿನಿಮಾ ತೆಲುಗು, ಕನ್ನಡ, ಹಿಂದಿ ಹಾಗೂ ಮಲಯಾಳಕ್ಕೆ ಡಬ್ ಆಗಲಿದೆ ಎಂದು ಚಿತ್ರ ತಂಡ ಸ್ಪಷ್ಟಪಡಿಸಿದೆ. ಈ ಸಿನಿಮಾಗಾಗಿ ಸನ್ನಿ ಕತ್ತಿ ವರಸೆ, ಕುದುರೆ ಸವಾರಿಯನ್ನೂ ಕಲಿತಿದ್ದು, ಇದರ ಪೋಸ್ಟರ್ ಹಾಗೂ ಫಸ್ಟ್ ಲುಕ್ ಸಹ ಬಿಡುಗಡೆಯಾಗಿದೆ. ಆದರೆ ಇದೊಂದು ಐತಿಹಾಸಿಕ ಸಿನಿಮಾವಾಗಿದ್ದು, ಇದರಲ್ಲಿ ಸನ್ನಿ ಲಿಯೋನ್ ಅಭಿನಯಿಸಬಾರದು. ನೀಲಿ ಚಿತ್ರಗಳಲ್ಲಿ ಅಭಿನಯಿಸಿರುವ ಸನ್ನಿ ಐತಿಹಾಸಿಕ ಸಿನಿಮಾದಲ್ಲಿ ಅಭಿನಯಿಸಿದರೆ ಕರ್ನಾಟಕದಲ್ಲಿ ಸಿನಿಮಾ ತೆರೆ ಕಾಣಲು ಬಿಡುವುದಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ಎಂದು ಪ್ರತಿಭಟಿಸುತ್ತಿದ್ದಾರೆ. ಐದು ಭಾಷೆಗಳಲ್ಲಿ ತೆರೆ ಕಾಣಲಿರುವ ಈ ಸಿನಿಮಾ ಕನ್ನಡಕ್ಕೆ ಡಬ್ ಆದರೂ ತೆರೆ ಕಾಣುತ್ತಾ ಅನ್ನೋ ಅನುಮಾನ ಈಗ ಕಾಡಲಾರಂಭಿಸಿದೆ.
Loading...