ಅಷ್ಟಾಗಿ ಸಿನಿಮಾಗಳು ಹಿಟ್ ಆಗದಿದ್ದರೂ ಕೀರ್ತಿ ಅವರ ಫೇಮ್ ಮಾತ್ರ ಇನ್ನೂ ಕಡಿಮೆ ಆಗಿಲ್ಲ. ಟಾಲಿವುಡ್ ‘ಪ್ರಿನ್ಸ್’ ಮಹೇಶ್ ಬಾಬು ಅಭಿನಯದ ‘ಸರ್ಕಾರು ವಾರಿ ಪಾಟ’ ಚಿತ್ರದಲ್ಲಿ ಕೀರ್ತಿ ಸುರೇಶ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಸ್ಟಾರ್ ನಟ ನಾನಿ ಜೊತೆ ಅವರ ಹೊಸ ಸಿನಿಮಾ ಇತ್ತೀಚೆಗಷ್ಟೇ ಸೆಟ್ಟೇರಿದೆ. ‘ಭೋಲಾ ಶಂಕರ್’ ಸಿನಿಮಾದಲ್ಲಿ ‘ಮೆಗಾ ಸ್ಟಾರ್’ ಚಿರಂಜೀವಿ ಅವರ ತಂಗಿಯಾಗಿ ಕೀರ್ತಿ ಸುರೇಶ್ ನಟಿಸುತ್ತಿದ್ದಾರೆ.
ಕೀರ್ತಿ ಸುರೇಶ್ ನಿರ್ಮಾಪಕ ಜಿ.ಸುರೇಶ್ ಕುಮಾರ್ ಮತ್ತು ನಟಿ ಮೇನಕಾ ಕುಮಾರ್ ಅವರ ಪುತ್ರಿ. ಬಹುಬೇಡಿಕೆಯ ನಟಿಯರಲ್ಲಿ ಮೊದಲ ಸಾಲಿನಲ್ಲಿ ನಿಲ್ಲೊ ಈ ಸ್ಲಿಮ್ ಎಂಡ್ ಟ್ರಿಮ್ ಹುಡುಗಿಗೆ, ಬಹುಭಾಷೆಗಳಲ್ಲಿ ಸಖತ್ ಡಿಮ್ಯಾಂಡ್ ಇದೆ. ಇದರ ನಡುವೆ ಕೀರ್ತಿ ಸುರೇಶ್ ಶೀಘ್ರದಲ್ಲೇ ಮದುವೆಯಾಗಲಿದ್ದಾರಂತೆ. ಇದಕ್ಕೆ ಸಂಬಂಧಿಸಿದ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.