Allu Arjun: ಸ್ಟೈಲಿಶ್​ ಸ್ಟಾರ್​ ಅಲ್ಲು ಅರ್ಜುನ್​ಗೆ ಕೊರೋನಾ ಸೋಂಕು..!

Allu Arjun: ಕೊರೋನಾ ಎರಡನೇ ಅಲೆ ಇಡೀ ದೇಶದಲ್ಲಿ ಆತಂಕ ಸೃಷ್ಟಿಸಿದೆ. ಈ ಸಲ ಸೋಂಕಿತರ ಸಂಖ್ಯೆ ಜೊತೆಗೆ ಸಾವನ್ನಪ್ಪುತ್ತಿರುವವ ಸಂಖ್ಯೆ ಸಹ ಹೆಚ್ಚಾಗುತ್ತಿದೆ. ಇದೇ ಕಾರಣದಿಂದಾಗಿ ಎಲ್ಲೆಡೆ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಹೀಗಿರುವಾಗಲೇ ಸಾಕಷ್ಟು ಮಂದಿ ಸೆಲೆಬ್ರಿಟಿಗಳಿಗೂ ಕೊರೋನಾ ಸೋಂಕು ತಗುಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಟಾಲಿವುಡ್​ನ ಸ್ಟೈಲಿಶ್​ ಸ್ಟಾರ್​ ಅಲ್ಲು ಅರ್ಜುನ್​ ಅವರಿಗೂ ಈಗ ಕೊರೋನಾ ಸೋಂಕಾಗಿದೆ. ಈ ವಿಷಯವನ್ನು ಅಲ್ಲು ಅರ್ಜುನ್​ ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ. (ಚಿತ್ರಗಳು ಕೃಪೆ: ಅಲ್ಲು ಅರ್ಜುನ್​ ಟ್ವಿಟರ್​ ಖಾತೆ)

First published: