ಶರತ್ ಬಾಬು ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದು, ಇದೀಗ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಚಿಂತಾಜನಕ ಸ್ಥಿತಿಯಲ್ಲಿದ್ದಾರೆ ಎಂದು ಹೇಳಲಾಗಿದೆ. ಶರತ್ ಬಾಬು ಸೆಪ್ಸಿಸ್ಗೆ ತುತ್ತಾಗಿದ್ದಾರೆ ಎನ್ನಲಾಗಿದೆ. ಅವರ ಮೂತ್ರಪಿಂಡ, ಶ್ವಾಸಕೋಶ, ಯಕೃತ್ತು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.