ಶ್ರೀನಿವಾಸ ಕೃಷ್ಣ ಅಯ್ಯಂಗಾರ್ ಭಗವಾನ್ ಎಂಬ ಹೆಸರಿದ್ದರೂ ಇವರು ಭಗವಾನ್ ಹೆಸರಿನಿಂದಲೇ ಪ್ರಸಿದ್ಧರು. ಡಾ. ರಾಜ್ ನಟನೆಯ ಬ್ಲಾಕ್ ಬಸ್ಟರ್ ಹಿಟ್ ‘ಕಸ್ತೂರಿ ನಿವಾಸ’, ‘ಎರಡು ಕನಸು’, ‘ಬಯಲು ದಾರಿ’, ‘ಗಿರಿ ಕನ್ಯೆ’, ‘ಚಂದನದ ಗೊಂಬೆ’, ‘ಆಪರೇಶನ್ ಡೈಮಂಡ್ ರಾಕೆಟ್’, ‘ಹೊಸ ಬೆಳಕು’ ಸೇರಿದಂತೆ 55 ಚಿತ್ರಗಳನ್ನು ಸ್ನೇಹಿತ ದೊರೈ ರಾಜ್ ಜೊತೆ ಸೇರಿ ನಿರ್ದೇಶಿಸಿದವರು.