ರಾಜ್ಯದ ವಿವಿಧ ಪ್ರದೇಶಗಳಲ್ಲಿ ಆಗಾಗ ಮಳೆ ಸುರಿದರೂ ಬಿಸಿಲಿನ ಬೇಗೆ ಮುಂದುವರೆದಿದೆ. ಭಾರಿ ಸೆಖೆಗೆ ಸಾರ್ವಜನಿಕರು ಕಂಗಾಲಾಗುತ್ತಿದ್ದಾರೆ. ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಬಿಸಿಲು ಜನರ ಮೈ ಸುಡುತ್ತಿದೆ. (ಸಾಂದರ್ಭಿಕ ಚಿತ್ರ)
2/ 8
ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರಸಕ್ತ ವರ್ಷ ಕನಿಷ್ಠ 2 ರಿಂದ 3 ಡಿಗ್ರಿ ಸೆಲ್ಸಿಯಸ್ ತಾಪಮಾನ ಏರಿಕೆಯಾಗಿದೆ. ರಾಯಚೂರಿನಲ್ಲಿ 39 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. (ಸಾಂದರ್ಭಿಕ ಚಿತ್ರ)
3/ 8
ಮೇ ತಿಂಗಳಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಇನ್ನೂ ಹೆಚ್ಚು ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯಿಂದ ಮುನ್ನೆಚ್ಚರಿಕೆ ನೀಡಿದೆ. (ಸಾಂದರ್ಭಿಕ ಚಿತ್ರ)
4/ 8
ಕರ್ನಾಟಕ ವಿಧಾನಸಭಾ ಚುನಾವಣೆ ಮೇ 10 ರಂದು ನಿಗದಿಯಾಗಿದೆ. ಈ ವೇಳೆ ಬಿಸಿಲಿನ ಝಳ ಹೆಚ್ಚಿರಲಿದೆ. ಹೀಗಾಗಿ ಮತದಾನದ ಮೇಲೆ ಬಿಸಿಲಿನ ತಾಪಮಾನದ ಕರಿನೆರಳು ಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ. (ಸಾಂದರ್ಭಿಕ ಚಿತ್ರ)
5/ 8
ಪ್ರತೀ ವರ್ಷ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಏಪ್ರಿಲ್ ತಿಂಗಳ ಬಳಿಕ ತಾಪಮಾನ ಏರಿಕೆಯಾಗುತ್ತಿತ್ತು. ಆದರೆ ಈ ಬಾರಿ ಕನಿಷ್ಠ 15 ದಿನ ಮೊದಲೇ ಬಿಸಿಲಿನ ಪ್ರಖರತೆ ಕಾಡುತ್ತಿದೆ. (ಸಾಂದರ್ಭಿಕ ಚಿತ್ರ)
ಸದ್ಯ ರಾಯಚೂರು ಜಿಲ್ಲೆಯಲ್ಲಿ ಬುಧವಾರ 39 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಇದು ಮೇ ತಿಂಗಳ ಹೊತ್ತಿಗೆ 44 ರಿಂದ 45 ಡಿಗ್ರಿ ಸೆಲ್ಸಿಯಸ್ವರೆಗೆ ಹೆಚ್ಚಳವಾಗಬಹುದು ಎಂಬ ಆತಂಕ ವ್ಯಕ್ತವಾಗಿದೆ. (ಸಾಂದರ್ಭಿಕ ಚಿತ್ರ)
8/ 8
ಬಿಸಿಲಿನ ಧಗೆ ತಪ್ಪಿಸಿ ಮತದಾನದ ಪ್ರಮಾಣ ಹೆಚ್ಚಳವಾಗಲು ವಿಶೇಷ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕ ವಲಯದಲ್ಲಿ ಮಾತುಗಳು ಕೇಳಿಬಂದಿವೆ. ತಂಪು ಪಾನೀಯ, ಮತಗಟ್ಟೆಗಳ ಬಳಿ ಅಲ್ಲಲ್ಲಿ ಟೆಂಟ್ ಹಾಕಿ ಮತದಾರರಿಗೆ ನೆರಳು ಒದಗಿಸುವಂತೆ ಅಭಿಪ್ರಾಯ ಕೇಳಿಬಂದಿದೆ. (ಸಾಂದರ್ಭಿಕ ಚಿತ್ರ)