22ರ ಹರೆಯದ ಅರ್ಜುನ್ ತೆಂಡೂಲ್ಕರ್ ಐಪಿಎಲ್ 14ನೇ ಸೀಸನ್ ನಲ್ಲಿ ಚೊಚ್ಚಲ ಪಂದ್ಯಕ್ಕಾಗಿ ಕಾಯುತ್ತಿದ್ದಾರೆ. ಕಳೆದ ಐಪಿಎಲ್‌ನಿಂದಲೂ ಅರ್ಜುನ್ ಮುಂಬೈ ಇಂಡಿಯನ್ಸ್‌ನ ಭಾಗವಾಗಿದ್ದಾರೆ. ಈ ಬಾರಿ ಮುಂಬೈ ಅವರನ್ನು 30 ಲಕ್ಷಕ್ಕೆ ಖರೀದಿಸಿತ್ತು, ಆದರೆ ಇನ್ನೂ ಆಡುವ ಅವಕಾಶ ಸಿಕ್ಕಿಲ್ಲ. ಮುಂಬೈ ಮತ್ತು ರಾಜಸ್ಥಾನ ನಡುವಿನ ಪಂದ್ಯ ಶನಿವಾರ ನಿಗದಿಯಾಗಿದ್ದು, ಅರ್ಜುನ್ ಮೈದಾನಕ್ಕಿಳಿಯುವ ಸಾಧ್ಯತೆ ಇದೆ.