ಈ ಹಿಂದಿನ ಅಂಕಿ ಅಂಶಗಳನ್ನು ಗಮನಿಸಿದ್ರೆ ಎರಡು ತಂಡಗಳು 15 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಡೆಲ್ಲಿ ವಿರುದ್ಧ ಹೈದರಾಬಾದ್ 9 ಬಾರಿ ಗೆಲ್ಲುವ ಮೂಲಕ ಮೇಲುಗೈ ಸಾಧಿಸಿದೆ. ಇನ್ನು ಡೆಲ್ಲಿ ಕ್ಯಾಪಿಟಲ್ಸ್ ಗೆದ್ದಿರುವುದು 6 ಬಾರಿ ಮಾತ್ರ. ಇನ್ನು ಕೊನೆಯ ಐದು ಪಂದ್ಯಗಳ ಮುಖಾಮುಖಿಯಲ್ಲೂ ಸನ್ರೈಸರ್ಸ್ ಹೈದರಾಬಾದ್ 3 ರಲ್ಲಿ ಗೆಲುವು ಸಾಧಿಸಿತ್ತು. ಅದರಲ್ಲೂ ಕಳೆದ ಸೀಸನ್ನಲ್ಲಿ ಆಡಿದ್ದ 2 ಪಂದ್ಯಗಳಲ್ಲೂ ಹೈದರಾಬಾದ್ ವಿರುದ್ಧ ಡೆಲ್ಲಿ ಸೋಲುಂಡಿತ್ತು.