IPL 2020: ಐಪಿಎಲ್ ಟೂರ್ನಿಯಲ್ಲಿ ಈವರೆಗೆ ಅತಿಹೆಚ್ಚು ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಆಟಗಾರರು ಯಾರು?; ಇಲ್ಲಿದೆ ಮಾಹಿತಿ
ಈ ಬಾರಿಯ IPL ಟೂರ್ನಿ ಅಬುಧಾಬಿಯಲ್ಲಿ ನಡೆಯುವುದು ಖಚಿತವಾಗಿದ್ದು, ಕಳೆದ 12 ಆವೃತ್ತಿಯಲ್ಲಿ ನಡೆದ IPL ಪಂದ್ಯಾವಳಿಯಲ್ಲಿ ಅತಿಹೆಚ್ಚು Man of The Match ಪ್ರಶಸ್ತಿ ಪಡೆದ ಆಟಗಾರ ಯಾರು? ಎಂಬ ಕುರಿತ ಮಾಹಿತಿ ಇಲ್ಲಿದೆ.
ಕ್ರಿಕೆಟ್ ಪ್ರೇಮಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿದ್ದ IPL 2020 ಆರಂಭವಾಗುವುದು ಕೊನೆಗೂ ಖಚಿತವಾಗಿದೆ. ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ ಆಯೋಜನೆಗೆ ಬಿಸಿಸಿಐ ಮುಂದಾಗಿದೆ. ಕೇಂದ್ರ ಸರ್ಕಾರವೂ ಗ್ರೀನ್ ಸಿಗ್ನಲ್ ನೀಡಿದೆ.
2/ 15
ಸೆಪ್ಟೆಂಬರ್ 19ರಿಂದ ನವೆಂಬರ್ 10ರವರೆಗೆ 2020 ಐಪಿಎಲ್ ಯುಎಇನಲ್ಲಿ ಆಯೋಜನೆಯಾಗಲಿದೆ.
3/ 15
8 ತಂಡಗಳು ಪ್ರಶಸ್ತಿಗಾಗಿ ಕಾದಾಡುವುದು ಬಹುತೇಕ ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಕಳೆದ 12 ಆವೃತ್ತಿಯಲ್ಲಿ ನಡೆದ IPL ಪಂದ್ಯಾವಳಿಯಲ್ಲಿ ಅತಿಹೆಚ್ಚು Man of The Match ಪಡೆದ ಆಟಗಾರ ಯಾರೂ? ಎಂಬ ಕುರಿತ ಮಾಹಿತಿ ಇಲ್ಲಿದೆ.
4/ 15
ಟಿ20 ಮಾದರಿ ಕ್ರಿಕೆಟ್ಲ್ಲಿ ದಾಖಲೆಗಳ ಮೇಲೆ ದಾಖಲೆಗಳನ್ನು ನಿರ್ಮಿಸಿರುವ ಬಿಗ್ ಹಿಟರ್, ಯೂನಿವರ್ಸಲ್ ಬಾಸ್ ಖ್ಯಾತಿಯ ಕ್ರಿಸ್ ಗೇಲ್ ಈವರೆಗೆ ಒಟ್ಟು 21 ಬಾರಿ Man of The Match ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.
5/ 15
ಕ್ರಿಸ್ ಗೇಲ್ ಪ್ರಸ್ತುತ ಫಾರ್ಮ್ ಕಳೆದುಕೊಂಡಿದ್ದರೂ ಸಹ ಟಿ-20 ಮಾದರಿಯಲ್ಲಿ ಅತಿಹೆಚ್ಚು ರನ್ ಹಾಗೂ ಶತಕಗಳನ್ನು ಗಳಿಸಿರುವ ದಾಖಲೆ ಇವರ ಹೆಸರಿನಲ್ಲೇ ಇದೆ. ಗೇಲ್ ಪ್ರಸ್ತುತ ಪಂಜಾಬ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.
6/ 15
ಮಿಸ್ಟರ್ 360 ಖ್ಯಾತಿಯ ಎಬಿ ಡಿವಿಲಿಯರ್ಸ್ ಅತಿಹೆಚ್ಚು Man of The Match ಪ್ರಶಸ್ತಿ ಸ್ವೀಕರಿಸಿದವರ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ.
7/ 15
ಕಳೆದ 7 ವರ್ಷಗಳಿಂದ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡದ ಅವಿಭಾಜ್ಯ ಅಂಗವಾಗಿರುವ ಎಬಿ ಡಿವಿಲಿಯರ್ಸ್ ಈವರೆಗೆ ಒಟ್ಟು 20 ಬಾರಿ Man of The Match ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.
8/ 15
ಅತಿಹೆಚ್ಚು Man of The Match ಪ್ರಶಸ್ತಿಯನ್ನು ಸ್ವೀಕರಿಸಿದವರ ಪಟ್ಟಿಯಲ್ಲಿ ಕ್ಯಾಪ್ಟನ್ ಕೂಲ್ ಮಹೇಂದ್ರ ಸಿಂಗ್ ಧೋನಿ 3ನೇ ಸ್ಥಾನದಲ್ಲಿದ್ದಾರೆ.
9/ 15
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅವಿಭಾಜ್ಯ ಅಂಗವಾಗಿರುವ ಧೋನಿ ಈವರೆಗೆ ಒಟ್ಟು 17 ಬಾರಿ Man of The Match ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.
10/ 15
ರಾಜಸ್ಥಾನ ತಂಡದ ಸ್ಟಾರ್ ಆಟಗಾರನಾಗಿ ಐಪಿಎಲ್ಗೆ ಪದಾರ್ಪಣೆ ಮಾಡಿ ಇದೀಗ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾರ್ ಓಪನರ್ ಆಗಿರುವ ಶೇನ್ ವಾಟ್ಸನ್ ಈ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ
11/ 15
ಸಿಡಿಲಬ್ಬರದ ಬ್ಯಾಟಿಂಗ್ಗೆ ಹೆಸರಾಗಿರುವ ವ್ಯಾಟ್ಸನ್ ಐಪಿಎಲ್ನಲ್ಲಿ ಈವರೆಗೆ ಒಟ್ಟು 17 ಬಾರಿ Man of The Match ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.
12/ 15
2013ರಿಂದ ಮುಂಬೈ ಇಂಡಿಯನ್ಸ್ ತಂಡದ ನಾಯಕನಾಗಿ ಯಶಸ್ಸು ಸಾಧಿಸಿರುವ ರೋಹಿತ್ ಶರ್ಮ ಈ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದಾರೆ.
13/ 15
ಮುಂಬೈ ತಂಡದ ಆರಂಭಿಕರಾಗಿ ಕಣಕ್ಕಿಳಿಯುವ ರೋಹಿತ್ ಶರ್ಮಾ ಈವರೆಗೆ 17 ಬಾರಿ Man of The Match ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.
14/ 15
ಸನ್ ರೈಸರ್ಸ್ ಹೈದರಾಬಾದ್ ತಂಡದ ಮಾಜಿ ನಾಯಕ ಆರಂಭಿಕ ಬ್ಯಾಟ್ಸ್ಮನ್ ಡೇವಿಡ್ ವಾರ್ನರ್ ಸಹ ಐಪಿಎಲ್ ಟೂರ್ನಿಯಲ್ಲಿ ಈವರೆಗೆ ಒಟ್ಟು 17 ಬಾರಿ Man of The Match ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.
15/ 15
ಇನ್ನೂ ಭಾರತದ ಸ್ಫೋಟಕ ಬ್ಯಾಟ್ಸ್ಮನ್ ಯೂಸುಫ್ ಪಠಾಣ್ ಸಹ ಈವರೆಗೆ ಒಟ್ಟು 17 ಬಾರಿ Man of The Match ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.