RCB vs CSK Playing 11: ಕೊಹ್ಲಿ ಪಡೆಯಲ್ಲಿ ಒಂದು ಮಹತ್ವದ ಬದಲಾವಣೆ: ತಂಡಗಳು ಇಂತಿವೆ
ಐಪಿಎಲ್ನಲ್ಲಿ ಈವರೆಗೆ ಉಭಯ ತಂಡಗಳು 25 ಬಾರಿ ಪರಸ್ಪರ ಮುಖಾಮುಖಿಯಾಗಿವೆ. ಇದರಲ್ಲಿ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ 15 ಬಾರಿ ಗೆಲುವು ದಾಖಲಿಸಿದರೆ, ಆರ್ಸಿಬಿ ಕೇವಲ 9 ರಲ್ಲಿ ಮಾತ್ರ ವಿಜಯ ಸಾಧಿಸಿದೆ. ಹಾಗೆಯೇ ಒಂದು ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿತು
ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಲಿರುವ ಐಪಿಎಲ್ನ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ.
2/ 8
ಈ ಪಂದ್ಯವು ಸಿಎಸ್ಕೆಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು, ಇಂದಿನ ಪಂದ್ಯದಲ್ಲಿ ಸೋತರೆ ಟೂರ್ನಿಯಿಂದ ಹೊರಬೀಳುವ ಮೊದಲ ತಂಡ ಎನಿಸಿಕೊಳ್ಳಲಿದೆ. ಇತ್ತ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಆರ್ಸಿಬಿ ಇಂದು ಗೆಲ್ಲುವ ಮೂಲಕ ಪ್ಲೇ ಆಫ್ಗೇರುವುದನ್ನು ಖಚಿತಪಡಿಸಲಿದೆ.
3/ 8
ಐಪಿಎಲ್ನಲ್ಲಿ ಈವರೆಗೆ ಉಭಯ ತಂಡಗಳು 25 ಬಾರಿ ಪರಸ್ಪರ ಮುಖಾಮುಖಿಯಾಗಿವೆ. ಇದರಲ್ಲಿ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ 15 ಬಾರಿ ಗೆಲುವು ದಾಖಲಿಸಿದರೆ, ಆರ್ಸಿಬಿ ಕೇವಲ 9 ರಲ್ಲಿ ಮಾತ್ರ ವಿಜಯ ಸಾಧಿಸಿದೆ. ಹಾಗೆಯೇ ಒಂದು ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿತು.
4/ 8
ಈ ಸೀಸನ್ನ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಸೂಪರ್ ಕಿಂಗ್ಸ್ ತಂಡವನ್ನು 37 ರನ್ಗಳಿಂದ ಸೋಲಿಸಿತು. ಕ್ಯಾಪ್ಟನ್ ವಿರಾಟ್ ಕೊಹ್ಲಿ ಅಜೇಯ 90 ರನ್ ಹಾಗೂ ಕ್ರಿಸ್ ಮೋರಿಸ್ ಮೂರು ವಿಕೆಟ್ ಉರುಳಿಸಿ ಆರ್ಸಿಬಿ ಜಯ ತಂದುಕೊಟ್ಟಿದ್ದರು. ಇದೀಗ ಈ ಸೋಲಿನ ಸೇಡನ್ನು ತೀರಿಸುವ ತವಕದಲ್ಲಿದೆ ಧೋನಿ ಪಡೆ.
5/ 8
ಇಂದಿನ ಪಂದ್ಯಕ್ಕಾಗಿ ಸಿಎಸ್ಕೆ 2 ಬದಲಾವಣೆ ಮಾಡಿಕೊಂಡಿದ್ರೆ, ಆರ್ಸಿಬಿ ಒಂದು ಮಹತ್ವದ ಬದಲಾವಣೆ ಮಾಡಿದೆ. ಅದರಂತೆ ಇಸುರು ಉಡಾನ ಸ್ಥಾನದಲ್ಲಿ ಬೆಂಗಳೂರು ಪರ ಮೊಯೀನ್ ಅಲಿ ಕಣಕ್ಕಿಳಿಯಲಿದ್ದಾರೆ. ಹಾಗೆಯೇ ಹ್ಯಾಝೆಲ್ವುಡ್ ಸ್ಥಾನದಲ್ಲಿ ಸ್ಯಾಂಟ್ನರ್ ಹಾಗೂ ಶಾರ್ದುಲ್ ಠಾಕೂರ್ ಜಾಗದಲ್ಲಿ ಮೋನು ಕುಮಾರ್ ಸಿಎಸ್ಕೆ ಪರ ಕಣಕ್ಕಿಳಿಯುತ್ತಿದ್ದಾರೆ.
6/ 8
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ ಇಲೆವೆನ್): ದೇವದತ್ ಪಡಿಕ್ಕಲ್, ಆರೋನ್ ಫಿಂಚ್, ವಿರಾಟ್ ಕೊಹ್ಲಿ (ನಾಯಕ), ಎಬಿ ಡಿವಿಲಿಯರ್ಸ್ , ಮೊಯೀನ್ ಅಲಿ, ಗುರ್ಕೀರತ್ ಸಿಂಗ್ ಮನ್, ಕ್ರಿಸ್ ಮೋರಿಸ್, ವಾಷಿಂಗ್ಟನ್ ಸುಂದರ್, ನವದೀಪ್ ಸೈನಿ, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್
7/ 8
ಚೆನ್ನೈ ಸೂಪರ್ ಕಿಂಗ್ಸ್ ( ಪ್ಲೇಯಿಂಗ್ ಇಲೆವೆನ್): ರುತುರಾಜ್ ಗಾಯಕ್ವಾಡ್, ಫಾಫ್ ಡು ಪ್ಲೆಸಿಸ್, ಅಂಬಾಟಿ ರಾಯುಡು, ಎನ್ ಜಗದೀಸನ್, ಎಂ.ಎಸ್. ಧೋನಿ (ನಾಯಕ), ಸ್ಯಾಮ್ ಕರ್ರನ್, ರವೀಂದ್ರ ಜಡೇಜಾ, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಹರ್, ಇಮ್ರಾನ್ ತಾಹಿರ್, ಮೋನು ಕುಮಾರ್