ಇಂಡಿಯನ್ ಪ್ರೀಮಿಯರ್ ಲೀಗ್ನ 23ನೇ ಪಂದ್ಯ ಇದು ಶಾರ್ಜಾ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದ್ದು ರಾಜಸ್ಥಾನ ರಾಯಲ್ಸ್ ತಂಡ ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ.
2/ 14
ಶ್ರೇಯಸ್ ಅಯ್ಯರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ 5 ಪಂದ್ಯಗಳಲ್ಲಿ ಕೇವಲ 1ಪಂದ್ಯದಲ್ಲಿ ಸೋತು 4 ಪಂದ್ಯಗಳಲ್ಲಿ ಜಯಭೇರಿ ಸಾಧಿಸಿದ್ದು (+1.060)ನೆಟ್ ರನ್ ರೇಟ್ ನಿಂದ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ.
3/ 14
ಸ್ಟೀವ್ ಸ್ಮಿತ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ 5 ಪಂದ್ಯದಲ್ಲಿ 2 ಪಂದ್ಯದಲ್ಲಿ ಗೆದ್ದು 3 ಪಂದ್ಯಗಳಲ್ಲಿ ಸೋತಿದ್ದು (-0.826) ನೆಟ್ ರನ್ ರೇಟ್ ಮೂಲಕ ಮೂಲಕ ಪಾಯಿಂಟ್ ಟೇಬಲ್ ನಲ್ಲಿ 7ನೇ ಸ್ಥಾನದಲ್ಲಿದೆ.
4/ 14
ಸ್ಫೋಟಕ ಆಟಗಾರರಿಂದ ತುಂಬಿರುವ ರಾಜಸ್ಥಾನ ರಾಯಲ್ಸ್ ತಂಡಕ್ಕೆ ಅಗ್ರ ಕ್ರಮಾಂಕದ ಆಟಗಾರರು ವೈಫಲ್ಯ ಅನುಭವಿಸುತ್ತಿರುವುದು ದೊಡ್ಡ ತಲೆನೋವಾಗಿದೆ.
5/ 14
ಸತತವಾಗಿ ಸೋತಿರುವ ಮೂರು ಪಂದ್ಯಗಳಲ್ಲೂ ಅಗ್ರ ಕ್ರಮಾಂಕದ ಆಟಗಾರರ ವೈಫಲ್ಯ ಮುಖ್ಯ ಕಾರಣವಾಗಿದೆ.
6/ 14
ಆರಂಭದ ಪಂದ್ಯಗಳಲ್ಲಿ ಅಬ್ಬರಿಸಿದ್ದ ಸಂಜು ಸಾಮ್ಸನ್ ಕಳೆದ ಮೂರು ಪಂದ್ಯಗಳಲ್ಲಿ ಮಂಕಾಗಿದ್ದಾರೆ. ನಾಯಕ ಸ್ಟೀವ್ ಸ್ಮಿತ್ ಕೂಡ ಬೇಗ ಪೆವಿಲಿಯನ್ ಸೇರಿಕೊಳ್ಳುತ್ತಿದ್ದಾರೆ.
7/ 14
ಯುವ ಆಟಗಾರ ಯಶಸ್ವಿ ಜೈಸ್ವಾಲ್ ನೀಡಿದ ಅವಕಾಶಗಳನ್ನು ಸರಿಯಾಗಿ ಸದುಪಯೋಗ ಪಡಿಸಿಕೊಳ್ಳುತ್ತಿಲ್ಲ. ಹೀಗಾಗಿ ಆರ್ಆರ್ ತಂಡದಲ್ಲಿ ಪ್ರಮುಖ ಬದಲಾವಣೆ ನಿರೀಕ್ಷಿಸಲಾಗಿದೆ.
8/ 14
ಇತ್ತ ಡೆಲ್ಲಿ ತಂಡದ ಬ್ಯಾಟಿಂಗ್ ವಿಭಾಗದಲ್ಲಿ ಭಾರತೀಯರು ಮಿಂಚುತ್ತಿರುವುದು ತಂಡಕ್ಕೆ ಹೆಚ್ಚು ಸಹಕಾರಿಯಾಗಿದೆ.
9/ 14
ಪೃಥ್ವಿಶಾ, ಶಿಖರ್ ಧವನ್, ನಾಯಕ ಶ್ರೇಯಸ್ ಅಯ್ಯರ್ ಶ್ರೇಷ್ಠ ಪ್ರದರ್ಶನ ತೋರುತ್ತಿದ್ದಾರೆ. ಬೌಲಿಂಗ್ನಲ್ಲಿ ರಬಾಡ, ಅನ್ರಿಚ್ ನೋರ್ಜೆ ಎದುರಾಳಿಗಳನ್ನು ಕಟ್ಟಿಹಾಕುವಲ್ಲಿ ಸಮರ್ಥರಿದ್ದಾರೆ.
10/ 14
ಕಳೆದ ಆರ್ಸಿಬಿ ವಿರುದ್ಧ ಮಿಂಚಿದ್ದ ಮಾರ್ಕಸ್ ಸ್ಟೋಯಿನಿಸ್ ಆಲ್ ರೌಂಡ್ ಪ್ರದರ್ಶನ ಕೂಡ ತಂಡಕ್ಕೆ ಪ್ಲಸ್ ಪಾಯಿಂಟ್. ಆದರೆ ಅನುಭವಿ ಸ್ಪಿನ್ನರ್ ಅಮಿತ್ ಮಿಶ್ರಾ ಗಾಯದ ಸಮಸ್ಯೆಯಿಂದ ಕೂಟದಿಂದ ಹೊರನಡೆದಿದ್ದು ಡೆಲ್ಲಿ ಸ್ಪಿನ್ ವಿಭಾಗಕ್ಕೆ ಕೊಂಚ ಮಟ್ಟಿನ ಹಿನ್ನಡೆಯಾಗಿದೆ.
11/ 14
ಡೆಲ್ಲಿ ಎಲ್ಲ ವಿಭಾಗದಲ್ಲಿ ಬಲಿಷ್ಠವಾಗಿದ್ದು ಇಂದಿನ ಪಂದ್ಯಕ್ಕೆ ಬದಲಾವಣೆ ಮಾಡುವುದು ಅನುಮಾನ.
12/ 14
ರಾಜಸ್ಥಾನ: ಯಶಸ್ವಿ ಜೈಸ್ವಾಲ್/ಮನನ್ ವೋಹ್ರಾ, ಸ್ಟೀವನ್ ಸ್ಮಿತ್ (ನಾಯಕ), ಜಾಸ್ ಬಟ್ಲರ್, ಸಂಜು ಸ್ಯಾಮ್ಸನ್, ಮಹಿಪಾಲ್ ಲೊನ್ರೊರ್, ರಾಹುಲ್ ತೆವಾತಿಯ, ಜೋಫ್ರಾ ಆರ್ಚರ್, ಟಾಮ್ ಕುರ್ರನ್, ಶ್ರೇಯಸ್ ಗೋಪಾಲ್, ಅಂಕಿತ್ ರಜಪೂತ್/ ವರುಣ್ ಆರುಣ್, ಕಾರ್ತಿಕ್ ತ್ಯಾಗಿ.