IPL 2020, DC vs RCB: ಬ್ಯಾಟಿಂಗ್ ಬಲ ಹೆಚ್ಚಿಸಲು ಆರ್ಸಿಬಿ ಮಾಸ್ಟರ್ ಪ್ಲ್ಯಾನ್: ಇಲ್ಲಿದೆ ಸಂಭಾವ್ಯ ಪ್ಲೇಯಿಂಗ್ XI
ಬ್ಯಾಟಿಂಗ್ ಬಲ ಹೆಚ್ಚಿಸಲು ಆ್ಯರೋನ್ ಫಿಂಚ್ ತಂಡಕ್ಕೆ ಕಮ್ಬ್ಯಾಕ್ ಮಾಡುವ ಅಂದಾಜಿದೆ. ಹೀಗಾದಲ್ಲಿ ಪಡಿಕ್ಕಲ್-ಫಿಂಚ್ ಓಪನರ್ ಆಗಿ ಕಣಕ್ಕಿಳಿದರೆ ಫಿಲಿಪ್ ಫಿನಿಶರ್ ಆಗಿ ಜವಾಬ್ದಾರಿ ನಿಭಾಯಿಸಬೇಕಿದೆ.
ಐಪಿಎಲ್ 2020ರಲ್ಲಿಂದು ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಪ್ಲೇ ಆಫ್ ಹಂತಕ್ಕೇರಲು ಶ್ರೇಯಸ್ ಅಯ್ಯರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೆಣೆಸಾಟ ನಡೆಸಲಿವೆ.
2/ 15
ಶೇಕ್ ಝಯೇದ್ ಕ್ರೀಡಾಂಗಣ ಈ ರೋಚಕ ಕಾದಾಟಕ್ಕೆ ಸಾಕ್ಷಿಯಾಗಲಿದ್ದು, ಗೆದ್ದ ತಂಡ ಎರಡನೇ ಟೀಂ ಆಗಿ ಪ್ಲೇ ಆಫ್ ಪ್ರವೇಶ ಪಡೆಯಲಿದೆ.
3/ 15
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 13 ಪಂದ್ಯಗಳನ್ನಾಡಿದ್ದು, 7 ಪಂದ್ಯಗಳಲ್ಲಿ ಗೆಲುವು ಹಾಗೂ 6 ಪಂದ್ಯಗಳಲ್ಲಿ ಸೋಲನ್ನು ಕಾಣುವ ಮೂಲಕ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಇತ್ತ ಡೆಲ್ಲಿ ಕೂಡ ಇದೇ ಸ್ಥಿತಿಯಲ್ಲಿದ್ದು ರನ್ರೇಟ್ ಆಧಾರದ ಮೇಲೆ ಮೂರನೇ ಸ್ಥಾನದಲ್ಲಿದೆ.
4/ 15
ಆರ್ಸಿಬಿಗೆ ಇದು ಲೀಗ್ ಹಂತದ ಕೊನೆಯ ಪಂದ್ಯವಾಗಿದೆ. ಹೀಗಾಗಿ ಈ ಪಂದ್ಯವನ್ನು ಜಯಿಸಿದರೆ ನೇರವಾಗಿ ಮೊದಲ ಕ್ವಾಲಿಫೈಯರ್ ಪಂದ್ಯವನ್ನಾಡಲು ಕೊಹ್ಲಿ ಪಡೆ ಅರ್ಹತೆಯನ್ನು ಗಿಟ್ಟಿಸಿಕೊಳ್ಳಲಿದೆ
5/ 15
ಕಳೆದ ಪಂದ್ಯದಲ್ಲಿ ಆರ್ಸಿಬಿ ತಂಡ ಹೈದರಾಬಾದ್ ವಿರುದ್ಧ ಹೀನಾಯ ಸೋಲುಕಂಡಿತ್ತು. ತಂಡದಲ್ಲಿ ಬದಲಾವಣೆ ಮಾಡಿದ್ದರೂ ಬ್ಯಾಟಿಂಗ್ – ಬೌಲಿಂಗ್ನಲ್ಲಿ ಸಂಪೂರ್ಣ ವಿಫಲವಾಗಿತ್ತು.
6/ 15
ಜೋಶ್ ಫಿಲಿಪ್ ತಂಡಕ್ಕೆ ಆಧಾರವಾಗಿ ನಿಂತಿದ್ದರಷ್ಟೆ. ಆರಂಭಿಕ ಹಂತದಲ್ಲಿ ಪಡಿಕಲ್ ಸಿಡಿಯಬೇಕಿದೆ.
7/ 15
ಸ್ಟಾರ್ ಬ್ಯಾಟ್ಸ್ಮನ್ಗಳಾದ ನಾಯಕ ವಿರಾಟ್ ಕೊಹ್ಲಿ, ಎಬಿಡಿ ವಿಲಿಯರ್ಸ್ ಮಧ್ಯಮ ಕ್ರಮಾಂಕದಲ್ಲಿ ರನ್ ಗಳಿಸುತ್ತಿಲ್ಲ.
8/ 15
ಬ್ಯಾಟಿಂಗ್ ಬಲ ಹೆಚ್ಚಿಸಲು ಆ್ಯರೋನ್ ಫಿಂಚ್ ತಂಡಕ್ಕೆ ಕಮ್ಬ್ಯಾಕ್ ಮಾಡುವ ಅಂದಾಜಿದೆ. ಹೀಗಾದಲ್ಲಿ ಪಡಿಕ್ಕಲ್-ಫಿಂಚ್ ಓಪನರ್ ಆಗಿ ಕಣಕ್ಕಿಳಿದರೆ ಫಿಲಿಪ್ ಫಿನಿಶರ್ ಆಗಿ ಜವಾಬ್ದಾರಿ ನಿಭಾಯಿಸಬೇಕಿದೆ.
9/ 15
ಗುರುಕೀರತ್ ಮನ್ಸಿಂಗ್ ನಿಧಾನಗತಿಯ ಬ್ಯಾಟಿಂಗ್ನಿಂದಾಗಿ ಟೀಕೆಗಳಿಗೆ ಗುರಿಯಾಗಿದ್ದರು. ಹೀಗಾಗಿ ಶಿವಂ ದುಬೆ ಕಮ್ಬ್ಯಾಕ್ ಮಾಡುವ ಅಂದಾಜಿದೆ.
10/ 15
ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಬೌಲಿಂಗ್ನಲ್ಲಿ ಅಮೋಘ ಪ್ರದರ್ಶನ ನೀಡುತ್ತಿದ್ದಾರೆ.
11/ 15
ಕ್ರಿಸ್ ಮಾರಿಸ್ ಕೂಡ ನಿಸ್ತೇಜ ನಿರ್ವಹಣೆ ಮುಂದುವರಿಸಿದ್ದಾರೆ. ಇಂಧು ಇವರು ತಮ್ಮ ನೈಜ್ಯ ಪ್ರದರ್ಶನ ನೀಡಬೇಕಿದೆ.
12/ 15
ಇಸುರು ಉದಾನ ಹಾಗೂ ಮೊಹಮ್ಮದ್ ಸಿರಾಜ್ ತುಂಬಾನೆ ದುಬಾರಿಯಾಗುತ್ತಿದ್ದಾರೆ. ಹೀಗಾಗಿ ಸಿರಾಜ್ ಬದಲು ಉಮೇಶ್ ಯಾದವ್ ಆಡುವ ಅಂದಾಜಿದೆ.
13/ 15
ಇಂಜುರಿಯಿಂದ ಗುಣಮುಖರಾದ ಬಳಿಕ ನವ್ದೀಪ್ ಸೈನಿ ಅಷ್ಟೊಂದು ಪರಿಣಾಮಕಾರಿಯಾಗಿ ಗೋಚರಿಸುತ್ತಿಲ್ಲ.
14/ 15
ಯಜುವೇಂದ್ರ ಚಹಾಲ್ ಸ್ಪಿನ್ ಮೋಡಿ ಚೆನ್ನಾಗಿ ಕೆಲಸ ಮಾಡುತ್ತಿದೆ.
15/ 15
ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ XI: ದೇವದತ್ ಪಡಿಕ್ಕಲ್, ಆ್ಯರೋನ್ ಫಿಂಚ್, ವಿರಾಟ್ ಕೊಹ್ಲಿ(ನಾಯಕ), ಎಬಿ ಡಿವಿಲಿಯರ್ಸ್(ವಿ.ಕೀ), ಜೋಶ್ ಫಿಲಿಪ್, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಕ್ರಿಸ್ ಮೊರೀಸ್, ಯಜುವೇಂದ್ರ ಚಹಾಲ್, ನವದೀಪ್ ಸೈನಿ ಹಾಗೂ ಉಮೇಶ್ ಯಾದವ್.