IPL 2020: RR vs SRH: ಹೈದರಾಬಾದ್ ಪರ ವೆಸ್ಟ್ ಇಂಡೀಸ್ ಸ್ಟಾರ್ ಕ್ರಿಕೆಟಿಗ ಇಂದು ಕಣಕ್ಕೆ?
ಎಸ್ಆರ್ಹೆಚ್ ತಂಡದಲ್ಲಿ ಒಂದು ಬದಲಾವಣೆ ಮಾಡುವ ಅಂದಾಜಿದೆ. ಕಳಪೆ ಫಾರ್ಮ್ನಲ್ಲಿರುವ ಕೇನ್ ವಿಲಿಯಮ್ಸನ್ ಬದಲು ವೆಸ್ಟ್ ಇಂಡೀಸ್ನ ಸ್ಟಾರ್ ಆಟಗಾರ ಜೇಸನ್ ಹೋಲ್ಡರ್ ಕಣಕ್ಕಿಳಿಯುವ ಅಂದಾಜಿದೆ.
ಐಪಿಎಲ್ನಲ್ಲಿ ಇಂದು ನಡೆಯಲಿರುವ 40ನೇ ಪಂದ್ಯದಲ್ಲಿ ಸ್ಟೀವ್ ಸ್ಮಿತ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ಹಾಗೂ ಡೇವಿಡ್ ವಾರ್ನರ್ ನೇತೃತ್ವದ ಸನ್ರೈಸರ್ಸ್ ಹೈದರಾಬಾದ್ ತಂಡಗಳು ಸೆಣೆಸಾಟ ನಡೆಸಲಿವೆ
2/ 10
ಹೈದರಾಬಾದ್ ಆಡಿರುವ 9 ಪಂದ್ಯಗಳಲ್ಲಿ ಕೇವಲ ಮೂರು ಪಂದ್ಯಗಳಲ್ಲಿ ಗೆದ್ದು ಆರರಲ್ಲಿ ಸೋಲು ಕಂಡಿದೆ. ಹೀಗಾಗಿ 6 ಅಂಕದೊಂದಿಗೆ 7ನೇ ಸ್ಥಾನದಲ್ಲಿದೆ. ಇತ್ತ ರಾಜಸ್ಥಾನ್ ಸ್ಥಿತಿ ಕೂಡ ಭಿನ್ನವಾಗಿಲ್ಲ. ಆಡಿರುವ 10 ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆದ್ದು ಆರರಲ್ಲಿ ಸೋತಿದೆ. 8 ಅಂಕದೊಂದಿಗೆ 6ನೇ ಸ್ಥಾನದಲ್ಲಿದೆ.
3/ 10
ಕಳೆದ ಪಂದ್ಯದಲ್ಲಿ ಹೈದರಾಬಾದ್ ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೂಪರ್ ಓವರ್ನಲ್ಲಿ ಸೋತಿತ್ತು. ಹೀಗಾಗಿ ಗೆಲುವಿನ ಲಯಕ್ಕೆ ಮರಳಬೇಕಾದ ಅನಿವಾರ್ಯತೆ ಇದೆ.
4/ 10
ಕಳೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಜಯಿಸಿ ಗೆಲುವಿನ ಲಯಕ್ಕೆ ಮರಳಿರುವ ಸ್ಮಿತ್ ಪಡೆ ಮತ್ತೊಂದು ಗೆಲುವವನ್ನು ಎದುರುನೋಡುತ್ತಿದೆ.
5/ 10
ಮಧ್ಯಮ ಕ್ರಮಾಂಕದಲ್ಲಿ ಜೋಸ್ ಬಟ್ಲರ್ ಅವರನ್ನು ಕಣಕ್ಕಿಳಿಸಿ ಯಶಸ್ಸಯ ಕಂಡಿರುವ ಸ್ಮಿತ್, ಸನ್ರೈಸರ್ಸ್ ವಿರುದ್ಧವೂ ಇದೇ ಮಾರ್ಗ ಅನುಸರಿಸುವ ಸಾಧ್ಯತೆಗಳಿವೆ.
6/ 10
ಸನ್ ರೈಸರ್ಸ್ ಹೈದರಾಬಾದ್ ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗದಲ್ಲಿ ಸಮತೋಲನದಿಂದ ಕೂಡಿದೆ. ಆದರೆ, ಟಾಪ್ ಆರ್ಡರ್ ಬ್ಯಾಟ್ಸಮನ್ಗಳು ಆರ್ಭಟಿಸಿದಾಗ ಮಾತ್ರ ದೊಡ್ಡ ಮಟ್ಟದ ರನ್ ಕಲೆಹಾಕಬಹುದಾಗಿದೆ.
7/ 10
ತಂಡಕ್ಕೆ ವಾರ್ನರ್ ನಾಯಕನ ಆಟವಾಡುತ್ತಿದ್ದರೆ, ಜಾನಿ ಬೈರ್ಸ್ಟೋ, ಮನೀಷ್ ಪಾಂಡೆ ಹಾಗೂ ಕೇನ್ ವಿಲಿಯಮ್ಸನ್ ತಮ್ಮ ಬ್ಯಾಟಿಂಗ್ ಶಕ್ತಿ ತೋರಬೇಕಿದೆ. ಟಿ.ನಟರಾಜನ್ ಮತ್ತು ರಶೀದ್ ಖಾನ್ ಹೊರತುಪಡಿಸಿ ಉಳಿದ ಬೌಲರ್ಗಳು ನಿರೀಕ್ಷೆ ಉಳಿಸಿಕೊಳ್ಳುತ್ತಿಲ್ಲ.
8/ 10
ಉಭಯ ತಂಡಗಳು ಇಲ್ಲಿಯವರೆಗೆ 12 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, 6 ಪಂದ್ಯಗಳಲ್ಲಿ ಹೈದರಾಬಾದ್ ತಂಡ ಗೆಲುವು ಕಂಡಿದ್ದರೆ, 6 ಪಂದ್ಯಗಳಲ್ಲಿ ರಾಜಸ್ಥಾನ ತಂಡ ಜಯ ಸಾಧಿಸಿದೆ.
9/ 10
ಎಸ್ಆರ್ಹೆಚ್ ತಂಡದಲ್ಲಿ ಒಂದು ಬದಲಾವಣೆ ಮಾಡುವ ಅಂದಾಜಿದೆ. ಕಳಪೆ ಫಾರ್ಮ್ನಲ್ಲಿರುವ ಕೇನ್ ವಿಲಿಯಮ್ಸನ್ ಬದಲು ವೆಸ್ಟ್ ಇಂಡೀಸ್ನ ಸ್ಟಾರ್ ಆಟಗಾರ ಜೇಸನ್ ಹೋಲ್ಡರ್ ಕಣಕ್ಕಿಳಿಯುವ ಅಂದಾಜಿದೆ.
10/ 10
ಆರ್ಆರ್ ಸಂಭಾವ್ಯ ತಂಡ: ರಾಬಿನ್ ಉತ್ತಪ್ಪ, ಬೆನ್ ಸ್ಟೋಕ್ಸ್, ಸಂಜು ಸ್ಯಾಮ್ಸನ್ (ವಿಕೀ), ಸ್ಟೀವನ್ ಸ್ಮಿತ್ (ನಾಯಕ), ಜೋಸ್ ಬಟ್ಲರ್, ರಾಹುಲ್ ತೆವಾಟಿಯಾ, ಜೋಫ್ರಾ ಆರ್ಚರ್, ರಿಯಾನ್ ಪರಾಗ್, ಶ್ರೇಯಸ್ ಗೋಪಾಲ್, ಜೈದೇವ್ ಉನಾದ್ಕತ್, ಕಾರ್ತಿಕ್ ತ್ಯಾಗಿ.