ಧೋನಿ ನಾಯಕತ್ವದ ಸಿಎಸ್ಕೆ ತಂಡವು ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ಮುಗ್ಗರಿಸಿದರೆ, 2ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ದ ಗೆಲ್ಲುವ ಮೂಲಕ ಭರ್ಜರಿ ಕಂಬ್ಯಾಕ್ ಮಾಡಿತ್ತು. ಹಾಗೆಯೇ ಪಂಜಾಬ್ ಕಿಂಗ್ಸ್ ವಿರುದ್ದ 4 ರನ್ಗಳಿಂದ ಸೋಲನುಭವಿಸಿದ ರಾಜಸ್ಥಾನ್ ರಾಯಲ್ಸ್ 2ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಬಗ್ಗು ಬಡಿದು ಗೆಲುವಿನ ಖಾತೆ ತೆರೆದಿತ್ತು.