ರಾಯಲ್ ಚಾಲೆಂಜರ್ಸ್ ಬೆಂಗಳೂರು ಚೆನ್ನೈನ ಪಿಚ್ನಲ್ಲಿ ಐಪಿಎಲ್ನಲ್ಲಿ ಅತಿ ಕಡಿಮೆ ಸ್ಕೋರ್ ಗಳಿಸಿದ ತಂಡ ಎಂಬ ಅಪಕೀರ್ತಿಯನ್ನು ಹೊಂದಿದೆ. 2019 ರಲ್ಲಿ ಆರ್ಸಿಬಿ ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಕೇವಲ 70 ರನ್ಗಳಿಗೆ ಆಲೌಟ್ ಆಗಿತ್ತು. ಇನ್ನು 2010 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ರಾಜಸ್ಥಾನ್ ರಾಯಲ್ಸ್ ವಿರುದ್ಧ ಐದು ವಿಕೆಟ್ ಕಳೆದುಕೊಂಡು 246 ರನ್ ಗಳಿಸಿರುವುದು ಇಲ್ಲಿನ ಅತ್ಯಧಿಕ ಮೊತ್ತ.