ಇಂಡಿಯನ್ ಪ್ರೀಮಿಯರ್ ಲೀಗ್ನ 16ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಗೆಲ್ಲಲು ಉಭಯ ತಂಡಗಳು ರಣತಂತ್ರ ರೂಪಿಸಿದೆ. ಈಗಾಗಲೇ ಚೆನ್ನೈ ಪಿಚ್ನಲ್ಲಿ ಸತತ ಮೂರು ಗೆಲುವು ದಾಖಲಿಸಿರುವ ಆರ್ಸಿಬಿ ಮುಂಬೈನಲ್ಲೂ ಜಯದೊಂದಿಗೆ ಅಭಿಯಾನ ಆರಂಭಿಸುವ ಇರಾದೆಯಲ್ಲಿದೆ. ಅತ್ತ ಮೂರು ಪಂದ್ಯಗಳಲ್ಲಿ 2 ಸೋಲು ಕಂಡಿರುವ ರಾಜಸ್ಥಾನ್ ರಾಯಲ್ಸ್ ಆರ್ಸಿಬಿ ವಿರುದ್ದ ಗೆಲ್ಲುವ ಮೂಲಕ ಕಂಬ್ಯಾಕ್ ಮಾಡುವ ವಿಶ್ವಾಸದಲ್ಲಿದೆ.
ಇನ್ನು ಆರ್ಆರ್ ಹಾಗೂ ಆರ್ಸಿಬಿ ಇದುವರೆಗೆ 23 ಬಾರಿ ಮುಖಾಮುಖಿಯಾಗಿದೆ. ಅದರಲ್ಲಿ ಉಭಯ ತಂಡಗಳು ತಲಾ 10 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇನ್ನು 3 ಪಂದ್ಯಗಳಲ್ಲಿ ಯಾವುದೇ ಫಲಿತಾಂಶ ಮೂಡಿಬಂದಿಲ್ಲ. ಇನ್ನು ಕೊನೆಯ 5 ಮುಖಾಮುಖಿಯಲ್ಲಿ ರಾಜಸ್ಥಾನ್ ರಾಯಲ್ಸ್ ಆರ್ಸಿಬಿ ವಿರುದ್ದ 3 ಗೆಲುವು ದಾಖಲಿಸಿದೆ. ಆದರೆ ಕಳೆದ ಸೀಸನ್ನಲ್ಲಿ ಆರ್ಸಿಬಿ ರಾಜಸ್ಥಾನ್ ವಿರುದ್ದ 2 ಪಂದ್ಯಗಳನ್ನು ಗೆದ್ದುಕೊಂಡಿತ್ತು ಎಂಬುದು ವಿಶೇಷ.