ಈ ಟಾರ್ಗೆಟ್ ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ 10 ಓವರ್ಗಳಲ್ಲಿ ತಮ್ಮ 4 ವಿಕೆಟ್ಗಳನ್ನು ಕಳೆದುಕೊಂಡಿತು. ರಾಜಸ್ಥಾನ 40 ರನ್ಗಳಿಗೆ 3 ವಿಕೆಟ್ಗಳನ್ನು ಕಳೆದುಕೊಂಡಾಗ ಕ್ರೀಸ್ಗಿಳಿದ ಯೂಸುಫ್ ಪಠಾಣ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಕೇವಲ 37 ಎಸೆತಗಳಲ್ಲಿ 100 ರನ್ ಗಳಿಸಿ ಚಚ್ಚಿದ ಪಠಾಣ್ ರನೌಟ್ ಆಗಿದ್ದು ತಂಡಕ್ಕೆ ಮುಳುವಾಯಿತು. ಪರಿಣಾಮ ಮುಂಬೈ ಈ ಪಂದ್ಯದಲ್ಲಿ 4 ರನ್ಗಳಿಂದ ಜಯಗಳಿಸಿತು. ಇದರ ಹೊರತಾಗಿಯೂ ಅದ್ಭುತ ಇನ್ನಿಂಗ್ಸ್ ಆಡಿದ್ದರಿಂದ ಯೂಸುಫ್ ಪಠಾಣ್ಗೆ ಪಂದ್ಯಶ್ರೇಷ್ಠ ಪ್ರಶಸ್ತಿ ನೀಡಲಾಯಿತು.
#2 ವಿರಾಟ್ ಕೊಹ್ಲಿ: 2016ರ ಐಪಿಎಲ್ನಲ್ಲಿ ಗುಜರಾತ್ ಲಯನ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕ ವಿರಾಟ್ ಕೊಹ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. 63 ಎಸೆತಗಳಲ್ಲಿ ಅಜೇಯ 100 ರನ್ ಬಾರಿಸಿದ ಕೊಹ್ಲಿ ಗುಜರಾತ್ ಲಯನ್ಸ್ಗೆ 180 ರನ್ಗಳ ಗುರಿ ನೀಡಿದರು. ಈ ಟಾರ್ಗೆಟ್ ಬೆನ್ನಟ್ಟಿದ ಗುಜರಾತ್ ಲಯನ್ಸ್ ಉತ್ತಮ ಬ್ಯಾಟಿಂಗ್ ಮಾಡಿ 6 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತು. ಆದರೆ, ತಂಡದ ಸೋಲಿನ ಹೊರತಾಗಿಯೂ ವಿರಾಟ್ ಕೊಹ್ಲಿಯನ್ನು ಮ್ಯಾನ್ ಆಫ್ ದಿ ಮ್ಯಾಚ್ ಎಂದು ಆಯ್ಕೆ ಮಾಡಲಾಯಿತು.
#1 ಶಿಖರ್ ಧವನ್: ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ 2ನೇ ಪಂದ್ಯದಲ್ಲಿ ಶಿಖರ್ ಧವನ್ ಅಜೇಯ 106 ರನ್ಗಳನ್ನು ಬಾರಿಸಿದ್ದರು. ಶಿಖರ್ ಶತಕದ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್ಗಳಲ್ಲಿ 164/5 ಸ್ಕೋರ್ ಗಳಿಸಿತು. 165 ರನ್ಗಳ ಟಾರ್ಗೆಟ್ ಪಡೆದ ಪಂಜಾಬ್ ನಿಕೋಲಸ್ ಪೂರನ್ ಹಾಗೂ ಮ್ಯಾಕ್ಸ್ವೆಲ್ ಉತ್ತಮ ಜೊತೆಯಾಟದಿಂದ 5 ವಿಕೆಟ್ಗಳ ಜಯ ಸಾಧಿಸಿತು. ಆದರೆ, ತಂಡದ ಸೋಲಿನ ಹೊರತಾಗಿಯೂ, ಶಿಖರ್ ಧವನ್ ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ನೀಡಲಾಯಿತು.