ಕ್ರಿಕೆಟ್ ಧನ್ ಧನಾ ಧನ್, ಜಿಯೋ ಧನ್ ಧನಾ ಧನ್ ಹೆಸರಿನಲ್ಲಿ ಹೊಸದೊಂದು ಆಫರ್ ಅನ್ನು ರಿಲಯನ್ಸ್ ಜಿಯೋ ತನ್ನ ಬಳಕೆದಾರರಿಗೆ ನೀಡಲು ಮುಂದಾಗಿದೆ. ಕೊರೋನಾದಿಂದಾಗಿ ಯುಎಇ ನಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಪಂದ್ಯಾವಳಿಗಳನ್ನು ಯಾವುದೇ ಅಡೆತಡೆಗಳು ಇಲ್ಲದೇ ಆನ್ಲೈನ್ನಲ್ಲಿ ನೋಡಲು ತನ್ನ ಚಂದದಾರರಿಗೆ ಈ ಹೊಸ ಆಫರ್ ವೊಂದನ್ನು ಬಿಡುಗಡೆ ಮಾಡಿದೆ.
ರೂ.401 ಪ್ಲ್ಯಾನ್: ಈ ಪ್ಲ್ಯಾನ್ ಅನ್ನು ರಿಚಾರ್ಜ್ ಮಾಡಿಸಿಕೊಂಡರೆ ಜಿಯೋ ಬಳಕೆದಾರರಿಗೆ ರೂ.399 ಮೌಲ್ಯದ ಡಿಸ್ನಿ + ಹಾಟ್ಸ್ಟಾರ್ VIP ಚಂದದಾರಿಕೆ ಒಂದು ವರ್ಷದ ವರೆಗೆ ಉಚಿತವಾಗಿ ದೊರೆಯಲಿದೆ. ಇದರೊಂದಿಗೆ ಒಂದು ತಿಂಗಳ ಅವಧಿಯಲ್ಲಿ ಬಳಕೆ ಮಾಡಿಲು 90 GB ಡೇಟಾ ಸಹ ಸಿಗಲಿದೆ. ಇದಲ್ಲದೆ ಅನ್ಲಿಮಿಟೆಡ್ ವಾಯ್ಸ್ ಕಾಲ್ ಮತ್ತು ಜಿಯೋ ಆಪ್ಗಳನ್ನು ಉಚಿತವಾಗಿ ಬಳಕೆ ಮಾಡಿಕೊಳ್ಳುವ ಅವಕಾಶವು ಇರಲಿದೆ.
ರೂ. 499 ಕ್ರಿಕೆಟ್ ಪ್ಯಾಕ್ (ಡೇಟಾ ಆಡ್-ಆನ್): ರೂ. 499ಕ್ಕೆ ಲಭ್ಯವಿರುವ ಪ್ಲಾನ್ ಅನ್ನು ರಿಚಾರ್ಜ್ ಮಾಡಿಸಿಕೊಂಡರೆ ಜಿಯೋ ಬಳಕೆದಾರರಿಗೆ ಸಾಕಷ್ಟು ಲಾಭವಾಗಲಿದೆ. ಜಿಯೋ ಈ ಪ್ಲಾನ್ ರಿಚಾರ್ಜ್ ಮಾಡಿಸುವವರಿಗೆ ರೂ.399 ಮೌಲ್ಯದ ಡಿಸ್ನಿ + ಹಾಟ್ಸ್ಟಾರ್ VIP ಚಂದದಾರಿಕೆಯನ್ನು ಒಂದು ವರ್ಷದ ವರೆಗೆ ನೀಡಲಿದೆ. ಇದರೊಂದಿಗೆ IPL ಪಂದ್ಯಾವಳಿಗಳು ನಡೆಯುವ 56 ದಿನಗಳ ಕಾಲ ಪ್ರತಿದಿನ 1.5GB ಹೈ ಸ್ಪೀಡ್ ಡೇಟಾವನ್ನು ಉಚಿತವಾಗಿ ಪಡೆಯಬಹುದು.
ರೂ. 777 ಕ್ವಾಟರ್ಲಿ ಪ್ಲ್ಯಾನ್: ರೂ.777ಕ್ಕೆ ರಿಚಾರ್ಜ್ ಮಾಡಿಸಿಕೊಳ್ಳುವ ಗ್ರಾಹಕರಿಗೆ ಜಿಯೋ ಹೆಚ್ಚಿನ ಲಾಭ ಒದಗಿಸಲಿದೆ. ಈ ಪ್ಲ್ಯಾನ್ ರಿಚಾರ್ಜ್ ಮಾಡಿಸುವವರಿಗೆ ರೂ.399 ಮೌಲ್ಯದ ಡಿಸ್ನಿ + ಹಾಟ್ಸ್ಟಾರ್ VIP ಚಂದದಾರಿಕೆಯನ್ನು ಒಂದು ವರ್ಷದ ವರೆಗೆ ನೀಡಲಿದೆ. ಇದರೊಂದಿಗೆ 84 ದಿನಗಳ ಕಾಲ ಬಳಕೆಗೆ 131 GB ಹೈ ಸ್ಪೀಡ್ ಡೇಟಾವನ್ನು ಉಚಿತವಾಗಿ ಪಡೆಯಬಹುದು. ಅಲ್ಲದೆ ಅನ್ಲಿಮಿಟೆಡ್ ವಾಯ್ಸ್ ಕಾಲ್ ಮತ್ತು ಜಿಯೋ ಆಪ್ಗಳನ್ನು ಉಚಿತವಾಗಿ ಬಳಕೆ ಮಾಡಿಕೊಳ್ಳುವ ಅವಕಾಶ ನೀಡಲಿದೆ.
ರೂ.2599 ವಾರ್ಷಿಕ ಪ್ಲ್ಯಾನ್: ರೂ.2599 ರಿಚಾರ್ಜ್ ಮಾಡಿಸಿಕೊಂಡವರಿಗೆ ಜಿಯೋ ರೂ.399 ಮೌಲ್ಯದ ಡಿಸ್ನಿ + ಹಾಟ್ಸ್ಟಾರ್ VIP ಚಂದದಾರಿಕೆಯನ್ನು ಒಂದು ವರ್ಷದ ವರೆಗೆ ನೀಡಲಿದೆ. ಅದರೊಂದಿಗೆ ಒಂದು ವರ್ಷದ ಅವಧಿಗೆ 740 GB ಹೈ ಸ್ಪೀಡ್ ಡೇಟಾ ಸಿಗಲಿದೆ. ಜೊತೆಗೆ ಅನ್ಲಿಮಿಟೆಡ್ ವಾಯ್ಸ್ ಕಾಲ್ ಮತ್ತು ಜಿಯೋ ಆಪ್ಗಳನ್ನು ಉಚಿತವಾಗಿ ಬಳಕೆ ಮಾಡಿಕೊಳ್ಳುವ ಅವಕಾಶ ಇರಲಿದೆ.