ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವಿವಿಧ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಅಧಿಸೂಚನೆಯ ಮೂಲಕ, ಖಾಲಿ ಹುದ್ದೆಗಳನ್ನು ನಿಯಮಿತ ಮತ್ತು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತದೆ. ಸಂಪೂರ್ಣ ವಿವರ ಈ ಕೆಳಗಿನಂತಿದೆ.
2/ 8
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ಅಧಿಸೂಚನೆಯಂತೆ ಎಸ್ಬಿಐನಲ್ಲಿ 54 ಉದ್ಯೋಗಗಳನ್ನು ಭರ್ತಿ ಮಾಡಲಾಗುತ್ತದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ
3/ 8
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬೇಕು. ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29ನೇ ಡಿಸೆಂಬರ್ 2022.
4/ 8
ಇದು ನಿಯಮಿತ ಮತ್ತು ಗುತ್ತಿಗೆ ಎರಡೂ ಹುದ್ದೆಗಳನ್ನು ಒಳಗೊಂಡಿದೆ. ನೇಮಕಾತಿ ಅಡಿಯಲ್ಲಿ ಸಾಮಾನ್ಯ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್ಲೈನ್ ಲಿಖಿತ ಪರೀಕ್ಷೆ ಮತ್ತು ಸಂದರ್ಶನದಲ್ಲಿ ಪಾಲ್ಗೊಳ್ಳಬೇಕಾಗುತ್ತದೆ.
5/ 8
ಗುತ್ತಿಗೆ ಹುದ್ದೆಯಲ್ಲಿ ಅಭ್ಯರ್ಥಿಗಳ ನೇಮಕಾತಿಗಾಗಿ ಅವರನ್ನು ಸಂದರ್ಶನಕ್ಕೆ ಶಾರ್ಟ್ಲಿಸ್ಟ್ ಮಾಡಲಾಗುತ್ತದೆ. ಪದವಿ, ಪಿಜಿ ಜೊತೆಗೆ ಸಂಬಂಧಪಟ್ಟ ಕ್ಷೇತ್ರದಲ್ಲಿ ಕೆಲಸದ ಅನುಭವ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
6/ 8
ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕು ಮತ್ತು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು. ಸಾಮಾನ್ಯ / EWS / OBC ವರ್ಗದ ಅಭ್ಯರ್ಥಿಗಳು ಅರ್ಜಿ ಶುಲ್ಕ ರೂ. 750 ಪಾವತಿಸಬೇಕು. SC/ ST/ PWD ವರ್ಗದ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.
7/ 8
ಅಭ್ಯರ್ಥಿಗಳು ಮೊದಲು ಅರ್ಜಿ ಸಲ್ಲಿಸಲು ಅಧಿಕೃತ ಸೈಟ್ ಗೆ ಭೇಟಿ ನೀಡಿ. ಮುಖಪುಟದಲ್ಲಿ ನೇಮಕಾತಿ ಟ್ಯಾಬ್ ಮೇಲೆ ಕ್ಲಿಕ್ ಮಾಡಿ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
8/ 8
ಎಸ್ಬಿಐ ಬ್ಯಾಂಕ್ನಲ್ಲಿ ಉದ್ಯೋಗ ಬಯಸುತ್ತಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಸುವರ್ಣಾವಕಾಶ. ಆದಷ್ಟು ಬೇಗ ಅಪ್ಲೈ ಮಾಡಿ ಏಕೆಂದರೆ ಡಿ.29 ಅರ್ಜಿ ಸಲ್ಲಿಕೆಗೆ ಕೊನೆ ದಿನ.