Canara Bank Recruitment 2023: ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್ ಆದ ಕೆನರಾ ಬ್ಯಾಂಕ್ನಲ್ಲಿ (Canara Bank) ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಒಟ್ಟು 2 ಅಸಿಸ್ಟೆಂಟ್ ವೈಸ್ ಪ್ರೆಸಿಡೆಂಟ್, ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಪ್ಲೈ ಮಾಡಲು ನಾಳೆಯೇ ಕೊನೆಯ ದಿನವಾಗಿದೆ (Last Date). ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಏಪ್ರಿಲ್ 10 ಅಂದರೆ ನಾಳೆಯೊಳಗೆ ಆಸಕ್ತರು ಅರ್ಜಿ ಹಾಕಿ. ಪೋಸ್ಟ್ / ಆಫ್ಲೈನ್ ಮೂಲಕ ಅರ್ಜಿ ಹಾಕಬೇಕು.