ಕೆಲವರು ಆನ್ ಲೈನ್ ಕೋರ್ಸ್ ಗಳ ಮೂಲಕ ತಮ್ಮ ಕೌಶಲ್ಯಗಳನ್ನು ಸುಧಾರಿಸಲು ಪ್ರಯತ್ನಿಸುತ್ತಿದ್ದಾರೆ. ಆ ಮೂಲಕ ಉದ್ಯೋಗವನ್ನು ಉಳಿಸಿಕೊಳ್ಳಲು ಮತ್ತು ಉತ್ತಮ ಅವಕಾಶಗಳನ್ನು ಪಡೆಯಲು ಹೆಚ್ಚು ಶ್ರಮಿಸುತ್ತಿದ್ದಾರೆ. ಇನ್ನು ಕೆಲವರು ಬೇರೆ ಕೆಲಸಗಳಿಗೆ ಹೋಗುತ್ತಿದ್ದಾರೆ. ಆದರೆ ಪ್ರಸ್ತುತ ಕೆಲವು ರೀತಿಯ ಉದ್ಯೋಗಗಳು ಮುಂಬರುವ ತಿಂಗಳುಗಳಲ್ಲಿ ಹೆಚ್ಚಿನ ಬೇಡಿಕೆಯಿರುವ ಸಾಧ್ಯತೆಯಿದೆ.(ಸಾಂಕೇತಿಕ ಚಿತ್ರ)
ಮೈಕ್ರೋ ಫೈನಾನ್ಸ್ ಸಂಸ್ಥೆಗಳು (MFI ಗಳು) ಒದಗಿಸುವ ಸೂಕ್ಷ್ಮ ಉದ್ಯಮಶೀಲತೆ ಮತ್ತು ಹಣಕಾಸಿನ ಸೌಲಭ್ಯಗಳು ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ನಿರೀಕ್ಷೆಯಿದೆ. ಈ ಕಾರ್ಯಕ್ರಮಗಳು ಹಣಕಾಸಿನ ನೆರವು, ವ್ಯಾಪಾರ ತರಬೇತಿ, ಆರ್ಥಿಕ ಸಾಕ್ಷರತೆ ಮತ್ತು ಕೌಶಲ್ಯ ಅಭಿವೃದ್ಧಿಯನ್ನು ಒದಗಿಸುವ ಮೂಲಕ ನೀಲಿ ಕಾಲರ್ ಉದ್ಯೋಗವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.