ಐಎಎಸ್ ರೋಹಿಣಿ ಸಿಂಧೂರಿ ಅವರ ತಾಯಿಯ ಹೆಸರು ಲಕ್ಷ್ಮಿ ರೆಡ್ಡಿ, ತಂದೆ ಸರ್ಕಾರಿ ನೌಕರಿಯಲ್ಲಿದ್ದವರು. ದೇಶದ ವಿವಿಧ ರಾಜ್ಯಗಳಲ್ಲಿ ತಂದೆಗೆ ಪೋಸ್ಟಿಂಗ್ ಆಗುತ್ತಿತ್ತು. ಅದರಿಂದ ರೋಹಿಣಿ ಸಿಂಧೂರಿ ಅವರು ದೇಶದ ವಿವಿಧ ಕೇಂದ್ರೀಯ ವಿದ್ಯಾಲಯಗಳಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದ್ದಾರೆ. ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (NIT) ಯಿಂದ ಕೆಮಿಕಲ್ ಎಂಜಿನಿಯರಿಂಗ್ ನಲ್ಲಿ ಬಿ.ಟೆಕ್ ಮಾಡಿದ್ದಾರೆ.