ಐಎಎಸ್ ಶುಭಂ ಕುಮಾರ್ ಸೋಷಿಯಲ್ ಮೀಡಿಯಾದಲ್ಲಿ ಹೆಚ್ಚು ಸಕ್ರಿಯರಲ್ಲ. ಆದರೆ ಯುಪಿಎಸ್ಸಿ ಪರೀಕ್ಷೆಯಲ್ಲಿ ಅಗ್ರಸ್ಥಾನ ಪಡೆದ ನಂತರ ಸಾಮಾಜಿಕ ಜಾಲತಾಣಗಳಾದ ಟ್ವಿಟರ್, ಫೇಸ್ ಬುಕ್ ಮತ್ತು ಇನ್ಸ್ಟಾಗ್ರಾಮ್ ಗಳಲ್ಲಿ ಅವರ ಹೆಸರಿನಲ್ಲಿ ಅನೇಕ ನಕಲಿ ಖಾತೆಗಳನ್ನು ತೆರೆಯಲಾಗಿದೆ. ಇದರಿಂದ ಶುಭಂ ತೀವ್ರ ಬೇಸರಗೊಂಡಿದ್ದಾರೆ. ತಮ್ಮ ಹೆಸರಿನಲ್ಲಿ ಸೃಷ್ಟಿಯಾಗಿರುವ ಈ ನಕಲಿ ಖಾತೆಗಳ ಕುರಿತು ವರದಿ ಮಾಡುತ್ತಲೇ ಇರುತ್ತಾರೆ.