Coconut Development Board Recruitment 2023: ತೆಂಗು ಅಭಿವೃದ್ಧಿ ಮಂಡಳಿಯು (Coconut Development Board) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಟೆಕ್ನಿಕಲ್ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜೂನ್ 2, 2023ರಂದು ಬೆಳಗ್ಗೆ 10.30ಕ್ಕೆ ಸಂದರ್ಶನ (Walk-in-Interview) ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ (Bengaluru) ಪೋಸ್ಟಿಂಗ್ ನೀಡಲಾಗುತ್ತದೆ. ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.