Post Office Recruitment 2023: ಭಾರತೀಯ ಅಂಚೆ ಇಲಾಖೆ(India Postal Department) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 58 ಸ್ಟಾಫ್ ಕಾರ್ ಡ್ರೈವರ್(Staff Car Driver) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್ 31, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಆಸಕ್ತರು ಆಫ್ಲೈನ್/ ಪೋಸ್ಟ್ ಮೂಲಕ ಅರ್ಜಿ ಹಾಕಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಬೇಗನೆ ಅರ್ಜಿ ಹಾಕಿ ಪೋಸ್ಟ್ ಆಫೀಸ್ ಉದ್ಯೋಗ ಪಡೆದುಕೊಳ್ಳಿ.