NIA Recruitment 2023: ರಾಷ್ಟ್ರೀಯ ತನಿಖಾ ಸಂಸ್ಥೆ (National Investigation Agency) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 44 ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ (Assistant Sub Inspector) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜೂನ್ 13, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಅಭ್ಯರ್ಥಿಗಳು ಆಫ್ಲೈನ್ (Offline) ಮೂಲಕ ಅರ್ಜಿ ಹಾಕಬೇಕು.