NIMHANS Recruitment 2023: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು(National Institute of Mental Health and Neuro Sciences) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 3 ಫೀಲ್ಡ್ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 20, 2023 ಅರ್ಜಿ ಹಾಕಲು ಕೊನೆಯ ದಿನವಾಗಿದೆ (Last Date). ರಾಮನಗರದಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು. ಆಸಕ್ತರು ಈಗಲೇ ಇ-ಮೇಲ್ ಮಾಡಿ.