NIT Karnataka Recruitment 2023: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ(National Institute of Technology -Karnataka) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜೂನಿಯರ್ ರಿಸರ್ಚ್ ಫೆಲೋ(Junior Research Fellow-JRF) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಫೆಬ್ರವರಿ 15, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಸುರತ್ಕಲ್ನಲ್ಲಿ ಉದ್ಯೋಗ ಮಾಡಲು ಇಚ್ಛಿಸುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಅಭ್ಯರ್ಥಿಗಳು ಇ-ಮೇಲ್(E-Mail) ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು.
ವಿದ್ಯಾರ್ಹತೆ: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಮೆಷಿನ್ ಡಿಸೈನ್/ ಥರ್ಮಲ್ ಎಂಜಿನಿಯರಿಂಗ್/ಮೆಕಾಟ್ರಾನಿಕ್ಸ್/ ಕಂಟ್ರೋಲ್ ಎಂಜಿನಿಯರಿಂಗ್/ ವೆಹಿಕಲ್ ಡೈನ,ಇಕ್ಸ್/ ಆಟೋಮೊಬೈಲ್ ಎಂಜಿನಿಯರಿಂಗ್/ ಮೆಷಿನ್ ಡೈನಮಿಕ್ಸ್ನಲ್ಲಿ ಬಿಇ/ಬಿ.ಟೆಕ್, ಎಂಇ/ಎಂ.ಟೆಕ್ ಪೂರ್ಣಗೊಳಿಸಿರಬೇಕು.