CBSE Class 10-12 Exam: ಇಂದಿನಿಂದ ಸಿಬಿಎಸ್‌ಇ 10, 12ನೇ ತರಗತಿ ಪರೀಕ್ಷೆ; ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ

ವಿದ್ಯಾರ್ಥಿಗಳೇ ಗಮನಿಸಿ, ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುತ್ತಿರುವ 10 ಮತ್ತು 12ನೇ ತರಗತಿ ಪರೀಕ್ಷೆ ಇಂದಿನಿಂದ ಅಂದರೆ ಫೆಬ್ರವರಿ 15ರಿಂದ ಪ್ರಾರಂಭವಾಗಲಿದೆ. 10ನೇ ತರಗತಿ ಪರೀಕ್ಷೆಗಳು ಮಾರ್ಚ್ 21ರವರೆಗೆ ಹಾಗೂ 12ನೇ ತರಗತಿ ಪರೀಕ್ಷೆಗಳು ಏಪ್ರಿಲ್ 5ರವೆರಗೆ ನಡೆಯುತ್ತದೆ. ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ…

First published:

  • 110

    CBSE Class 10-12 Exam: ಇಂದಿನಿಂದ ಸಿಬಿಎಸ್‌ಇ 10, 12ನೇ ತರಗತಿ ಪರೀಕ್ಷೆ; ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ

    ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್ (ಸಿಬಿಎಸ್ಇ) ನಡೆಸುವ 10 ಮತ್ತು 12 ನೇ ತರಗತಿಯ ಬೋರ್ಡ್ ಪರೀಕ್ಷೆಗಳು ಇಂದಿನಿಂದ ಆರಂಭವಾಗಲಿದೆ. 10ನೇ ತರಗತಿಯ ಬೋರ್ಡ್ ಪರೀಕ್ಷೆಗಳು ಮಾರ್ಚ್ 21ರವೆರೆಗೆ ಹಾಗೂ 12ನೇ ತರಗತಿಯ ಪರೀಕ್ಷೆಗಳು ಏಪ್ರಿಲ್ 5ರವರೆಗೆ ನಡೆಯಲಿದೆ.

    MORE
    GALLERIES

  • 210

    CBSE Class 10-12 Exam: ಇಂದಿನಿಂದ ಸಿಬಿಎಸ್‌ಇ 10, 12ನೇ ತರಗತಿ ಪರೀಕ್ಷೆ; ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ

    ಸುಮಾರು 38,83,710 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಅವರಲ್ಲಿ 2186940 ವಿದ್ಯಾರ್ಥಿಗಳು 10ನೇ ತರಗತಿ ಪರೀಕ್ಷೆಗೆ ಹಾಜರಾಗಲಿದ್ದಾರೆ. ಹಾಗೆಯೇ 1696770 ವಿದ್ಯಾರ್ಥಿಗಳು 12ನೇ ತರಗತಿ ಪರೀಕ್ಷೆಗೆ ಹಾಜರಾಗಲಿದ್ದಾರೆ. 10ನೇ ತರಗತಿ ಪರೀಕ್ಷೆಯನ್ನು 16 ದಿನಗಳ ಕಾಲ ನಡೆಸಲಾಗುತ್ತಿದ್ದು, ಮಾರ್ಚ್ 21ಕ್ಕೆ ಮುಕ್ತಾಯಗೊಳ್ಳಲಿದೆ. ಇನ್ನು 12ನೇ ತರಗತಿ ಪರೀಕ್ಷೆಯನ್ನು 36 ದಿನಗಳವರೆಗೆ ನಡೆಸಲಾಗುತ್ತಿದ್ದು, ಏಪ್ರಿಲ್ 5ರಂದು ಮುಕ್ತಾಯಗೊಳ್ಳಲಿದೆ.

    MORE
    GALLERIES

  • 310

    CBSE Class 10-12 Exam: ಇಂದಿನಿಂದ ಸಿಬಿಎಸ್‌ಇ 10, 12ನೇ ತರಗತಿ ಪರೀಕ್ಷೆ; ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ

    ಬೋರ್ಡ್ ಪರೀಕ್ಷೆಗಳಿಗೆ ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30ರವರೆಗೆ ಸಮಯ ನಿಗದಿ ಮಾಡಲಾಗಿದೆ. ಆದರೆ ಕೆಲವು ವಿಷಯಗಳ ಪರೀಕ್ಷೆಯು 12.30ಕ್ಕೆ ಮುಕ್ತಾಯವಾಗಲಿವೆ. ವಿದ್ಯಾರ್ಥಿಗಳು ಬೆಳಗ್ಗೆ 9.30ರ ವೇಳೆಗೆ ನಿಗದಿತ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕೆಂದು ಸೂಚಿಸಲಾಗಿದೆ.

    MORE
    GALLERIES

  • 410

    CBSE Class 10-12 Exam: ಇಂದಿನಿಂದ ಸಿಬಿಎಸ್‌ಇ 10, 12ನೇ ತರಗತಿ ಪರೀಕ್ಷೆ; ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ

    ಬೆಳಗ್ಗೆ 10 ಗಂಟೆಗೆ ಪರೀಕ್ಷಾ ಕೇಂದ್ರದ ಗೇಟ್ನ ಬಾಗಿಲು ಹಾಕಲಾಗುತ್ತದೆ. ನಂತರ ಬರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡುವುದಿಲ್ಲ ಎಂದು ಸಿಬಿಎಸ್ಇ ತಿಳಿಸಿದೆ.

    MORE
    GALLERIES

  • 510

    CBSE Class 10-12 Exam: ಇಂದಿನಿಂದ ಸಿಬಿಎಸ್‌ಇ 10, 12ನೇ ತರಗತಿ ಪರೀಕ್ಷೆ; ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ

    10ನೇ ತರಗತಿಯ ಬೋರ್ಡ್ ಪರೀಕ್ಷೆಯು ಚಿತ್ರಕಲೆ, ರಾಯ್, ಗುರುಂಗ್, ತಮಾಂಗ್, ಶೇರ್ಪಾ ಮತ್ತು ಥಾಯ್ ಪತ್ರಿಕೆಗಳೊಂದಿಗೆ ಪ್ರಾರಂಭವಾಗುತ್ತದೆ. ಕೊನೆಯಲ್ಲಿ ಗಣಿತದ ಮೂಲ ಪತ್ರಿಕೆ ಪರೀಕ್ಷೆಯೊಂದಿಗೆ ಮುಕ್ತಾಯವಾಗಲಿದೆ.

    MORE
    GALLERIES

  • 610

    CBSE Class 10-12 Exam: ಇಂದಿನಿಂದ ಸಿಬಿಎಸ್‌ಇ 10, 12ನೇ ತರಗತಿ ಪರೀಕ್ಷೆ; ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ

    ಇನ್ನು ಸಿಬಿಎಸ್ಇ12ನೇ ತರಗತಿಯ ಬೋರ್ಡ್ ಪರೀಕ್ಷೆಯು ಎಂಟರ್ಪ್ರೆನರ್ಶಿಪ್ ಪತ್ರಿಕೆಯೊಂದಿಗೆ ಪ್ರಾರಂಭವಾಗಲಿದೆ. ಹಾಗೆಯೇ ಸೈಕಾಲಜಿ ಪತ್ರಿಕೆಯೊಂದಿಗೆ ಮುಕ್ತಾಯವಾಗಲಿದೆ.

    MORE
    GALLERIES

  • 710

    CBSE Class 10-12 Exam: ಇಂದಿನಿಂದ ಸಿಬಿಎಸ್‌ಇ 10, 12ನೇ ತರಗತಿ ಪರೀಕ್ಷೆ; ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ

    10 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆ ಆರಂಭವಾಗುತ್ತಿದ್ದಂತೆಯೇ ಪ್ರಶ್ನೆ ಪತ್ರಿಕೆಗಳನ್ನು ಓದಿಕೊಳ್ಳಲು 15 ನಿಮಿಷ ಕಾಲಾವಕಾಶ ನೀಡಲಾಗಿದೆ. ಈಗಾಗಲೇ ಸಿಬಿಎಸ್ಇಯು ಬಿಡುಗಡೆ ಮಾಡಿರುವ ವೇಳಾಪಟ್ಟಿಯ ಪ್ರಕಾರವೇ ಪರೀಕ್ಷೆ ನಡೆಸಲಾಗುತ್ತದೆ ಎಂದು ಸಿಬಿಎಸ್ಇ ತಿಳಿಸಿದೆ.

    MORE
    GALLERIES

  • 810

    CBSE Class 10-12 Exam: ಇಂದಿನಿಂದ ಸಿಬಿಎಸ್‌ಇ 10, 12ನೇ ತರಗತಿ ಪರೀಕ್ಷೆ; ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ

    ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಸಹಿ ಮಾಡಿದ ಪ್ರವೇಶ ಪತ್ರ, ಶಾಲೆಯ ಐಡಿಕಾರ್ಡ್ ಮತ್ತು ಯಾವುದಾದರೂ ಒಂದು ಐಡಿ ಕಾರ್ಡ್ ತೆಗೆದುಕೊಂಡು ಬರಬೇಕೆಂದು ಸಿಬಿಎಸ್ಇಯು ಸೂಚನೆ ನೀಡಿದೆ.

    MORE
    GALLERIES

  • 910

    CBSE Class 10-12 Exam: ಇಂದಿನಿಂದ ಸಿಬಿಎಸ್‌ಇ 10, 12ನೇ ತರಗತಿ ಪರೀಕ್ಷೆ; ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ

    ಸರಿಯಾದ ದಾಖಲೆಗಳಿಲ್ಲದೆ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದಿಲ್ಲ ಎಂದು ಎಚ್ಚರಿಕೆ ನೀಡಲಾಗಿದೆ. ಇನ್ನು ಪರೀಕ್ಷೆಯ ಕುರಿತ ಹೆಚ್ಚಿನ ಮಾಹಿತಿಗೆ ವೆಬ್ಸೈಟ್ www.cbse.gov.in ಸಂಪರ್ಕಿಸಬಹುದಾಗಿದೆ.

    MORE
    GALLERIES

  • 1010

    CBSE Class 10-12 Exam: ಇಂದಿನಿಂದ ಸಿಬಿಎಸ್‌ಇ 10, 12ನೇ ತರಗತಿ ಪರೀಕ್ಷೆ; ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ

    "ದೇಶದಾದ್ಯಂತ 7,250 ಕ್ಕೂ ಹೆಚ್ಚು ಕೇಂದ್ರಗಳು ಮತ್ತು ವಿದೇಶದಲ್ಲಿರುವ 26 ದೇಶಗಳಿಂದ ಸುಮಾರು 38,83,710 ವಿದ್ಯಾರ್ಥಿಗಳು ಈ ಪರೀಕ್ಷೆ ಬರೆಯಲಿದ್ದಾರೆ" ಎಂದು CBSE ತಿಳಿಸಿದೆ ಇನ್ನು ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳನ್ನು ಸುಗಮವಾಗಿ ನಡೆಸಲು ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ.

    MORE
    GALLERIES