Covid School Guidelines: ಖಾಸಗಿ ಶಾಲೆಗಳಲ್ಲಿ ಮಕ್ಕಳಿಗೆ ಮಾಸ್ಕ್ ಕಡ್ಡಾಯ, ರುಪ್ಸಾ ಮಹತ್ವದ ನಿರ್ಧಾರ
ನಾಳೆಯಿಂದಲೇ ಶಾಲೆಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಲು ನಿರ್ಧಾರ ಮಾಡಲಾಗಿದೆ. ಪಬ್ಲಿಕ್ ಪರೀಕ್ಷೆ ಬಿಟ್ಟು ಉಳಿದ ತರಗತಿಗಳ ಪರೀಕ್ಷೆ ನಡೆಸುವ ಬಗ್ಗೆ ಕೂಡ ಸಭೆಯಲ್ಲಿ ಚರ್ಚೆ ನಡೆಸುತ್ತೇವೆ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಹೇಳಿಕೆ ನೀಡಿದ್ದಾರೆ.
ಮತ್ತೆ ಕೊರೊನಾ ತನ್ನ ಅಸ್ತಿತ್ವ ತೋರುತ್ತಿರುವ ಈ ವೇಳೆ ಶಾಲೆಗಳಲ್ಲಿ ಮುಂಜಾಗ್ರತಾ ಕ್ರಮ ಅನುಸರಿಸುವುದು ಬಹಳ ಮುಕ್ಯವಾಗುತ್ತದೆ. ಅದೇ ಸರ್ಕಾರದ ಗೈಡ್ಸ್ ಲೈನ್ಸ್ ಬಿಡುಗಡೆಗೂ ಮುನ್ನವೇ ಖಾಸಗಿ ಶಾಲೆ ರುಪ್ಸಾ ಮಹತ್ವದ ನಿರ್ಧಾರ ಕೈಗೊಂಡಿದೆ.
2/ 8
ಖಾಸಗಿ ಶಾಲೆಗಳಲ್ಲಿ ಮಕ್ಕಳಿಗೆ ಮಾಸ್ಕ್ ಕಡ್ಡಾಯಮಾಡಲು ಇದೀಗ ನಿರ್ಧಾರ ಕೈಗೊಳ್ಳಲಾಗಿದೆ. ಕೊರೋನಾ ಕುರಿತು ಪೋಷಕರಿಂದ ನಿತ್ಯ ಶಾಲಾ ಮುಖ್ಯಸ್ಥರಿಗೆ ನೂರಾರು ಕರೆಗಳು ಬರಲು ಆರಂಭವಾಗಿದ್ದು ಮುಂಜಾಗೃತಾ ಕ್ರಮ ವಹಿಸಲಾಗಿದೆ.
3/ 8
ಇಂದು ಖಾಸಗಿ ಶಾಲೆ ಆಡಳಿತ ಮಂಡಳಿಗಳ ಜೊತೆ ರುಪ್ಸಾ ಪದಾಧಿಕಾರಿಗಳ ಸಭೆ ನಡೆಸಲಾಗಿದೆ. ವೀಡಿಯೋ ಕಾನ್ಫರೆನ್ಸ್ ಮೂಲಕ ಪದಾಧಿಕಾರಿಗಳ ಸಭೆಯಲ್ಲಿ ಕೊರೊನಾ ಕುರಿತು ಚರ್ಚೆ ಮಾಡಿದ್ದಾರೆ.
4/ 8
ಸಭೆಯಲ್ಲಿ ಮತ್ತೆ ಮಾಸ್ಕ್ ಕಡ್ಡಾಯ ಮಾಡುವುದು ಹಾಗೂ ಸಾಮಾಜಿಕ ಅಂತರದ ಬಗ್ಗೆ ಚರ್ಚೆಯಾಗಿದ್ದು ಅವಶ್ಯಕತೆ ಇದ್ರೆ ಆನ್ ಲೈನ್ ಕ್ಲಾಸ್ ತರಗತಿ ನಡೆಸುವ ಬಗ್ಗೆ ಚರ್ಚೆಯಾಗಿದೆ.
5/ 8
ಸರ್ಕಾರ ಮಾರ್ಗಸೂಚಿ ಬಿಡುಗಡೆಗೂ ಮುನ್ನವೇ ಖಾಸಗಿ ಶಾಲೆಗಳಲ್ಲಿ ಮಾಸ್ಕ್ ಕಡ್ಡಾಯ ಜಾರಿಗೆ ನಿರ್ಧಾರಮಾಡಲಾಗಿದ್ದು. ಈ ಮುಂಜಾಗೃತಾ ಕೃಮ ಸರಿಯಾಗಿದೆ. ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯಿಂದ ಇದು ಉತ್ತಮವಾಗಿದೆ.
6/ 8
ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಾಲಾ ಸಿಬ್ಬಂದಿ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ತಿಳಿಸಲಾಗಿದೆ. ಸಾಮಾಜಿಕ ಅಂತರ ಪಾಲನೆ ಮಾಡಲು ಸಹ ಸೂಚನೆ ಹೊರಡಿಸಲಾಗಿದೆ.
7/ 8
ನೆಗಡಿ, ಕೆಮ್ಮು, ಜ್ವರ ಅಂತಹ ಲಕ್ಷಣಗಳು ಕಂಡುಬಂದ್ರೆ ಕೂಡಲೇ ಟೆಸ್ಟಿಂಗ್ ಮಾಡಿಸಲು ಸೂಚನೆ ನೀಡಲಾಗಿದೆ. ರುಪ್ಸಾ ಸಂಘಟನೆ ಅಡಿಯಲ್ಲಿ ರಾಜ್ಯದಲ್ಲಿ 13 ಸಾವಿರ ಶಾಲೆಗಳು ನೋಂದಣಿಯಾಗಿದೆ.
8/ 8
ನಾಳೆಯಿಂದಲೇ ಶಾಲೆಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಲು ನಿರ್ಧಾರ ಮಾಡಲಾಗಿದೆ. ಪಬ್ಲಿಕ್ ಪರೀಕ್ಷೆ ಬಿಟ್ಟು ಉಳಿದ ತರಗತಿಗಳ ಪರೀಕ್ಷೆ ನಡೆಸುವ ಬಗ್ಗೆ ಕೂಡ ಸಭೆಯಲ್ಲಿ ಚರ್ಚೆ ನಡೆಸುತ್ತೇವೆ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಹೇಳಿಕೆ ನೀಡಿದ್ದಾರೆ.