School Timings: ಶಾಲಾ ಸಮಯ ಬೆಳಗ್ಗೆ 10 ರಿಂದ 12.30ಕ್ಕೆ ಬದಲಾಗಲಿ- ಡಾ.ಸಿ.ಎನ್.ಮಂಜುನಾಥ್
ಮಕ್ಕಳ ಆರೋಗ್ಯ ದೃಷ್ಟಿಯಿಂದ ಶಾಲಾ ಸಮಯ ಬದಲಾಗಬೇಕೆಂದು ಹೃದ್ರೋಗ ತಜ್ಞ ಡಾ.ಸಿ.ಎನ್. ಮಂಜುನಾಥ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.7-8 ವರ್ಷದೊಳಗಿನ ಮಕ್ಕಳು ಹೆಚ್ಚು ನಿದ್ರೆ ಮಾಡಬೇಕು. ಆದರೆ ಶಾಲೆಗಳಿಗೆ ಬೇಗ ಹೋಗುವ ಸಲುವಾಗಿ ಅವರ ನಿದ್ರೆಯೇ ಹಾಳಾಗುತ್ತಿದೆ. ನಿದ್ರಾಹೀನತೆಯಿಂದಾಗಿ ಮಕ್ಕಳ ರೋಗ ನಿರೋಧಕ ಶಕ್ತಿಯೇ ಕಡಿಮೆಯಾಗುತ್ತಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.
ಮಕ್ಕಳ ಆರೋಗ್ಯ ದೃಷ್ಟಿಯಿಂದ ಶಾಲಾ ಸಮಯ ಬದಲಾಗಬೇಕೆಂದು ಹೃದ್ರೋಗ ತಜ್ಞ ಡಾ.ಸಿ.ಎನ್. ಮಂಜುನಾಥ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
2/ 7
7-8 ವರ್ಷದೊಳಗಿನ ಮಕ್ಕಳು ಹೆಚ್ಚು ನಿದ್ರೆ ಮಾಡಬೇಕು. ಆದರೆ ಶಾಲೆಗಳಿಗೆ ಬೇಗ ಹೋಗುವ ಸಲುವಾಗಿ ಅವರ ನಿದ್ರೆಯೇ ಹಾಳಾಗುತ್ತಿದೆ. ನಿದ್ರಾಹೀನತೆಯಿಂದಾಗಿ ಮಕ್ಕಳ ರೋಗ ನಿರೋಧಕ ಶಕ್ತಿಯೇ ಕಡಿಮೆಯಾಗುತ್ತಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.
3/ 7
ಶಾಲಾ ಸಮಯವನ್ನು ಬೆಳಗ್ಗೆ 10ರಿಂದ ಮಧ್ಯಾಹ್ನ 12.30ರವರೆಗೆ ನಿಗದಿಗೊಳಿಸಬೇಕು ಎಂಬುದು ಡಾ.ಮಂಜುನಾಥ್ ಅವರು ನಿಲುವು. ಕನಿಷ್ಠ 2ನೇ ತರಗತಿವರೆಗೆ ಶಾಲೆಗಳಲ್ಲಿ ಈ ಸಮಯವನ್ನು ನಿಗದಿ ಮಾಡಬೇಕು ಎಂದು ಅವರು ಹೇಳಿದ್ದಾರೆ.
4/ 7
ಇತ್ತೀಚಿನ ದಿನಗಳಲ್ಲಿ ಅದರಲ್ಲೂ ನಗರ ಪ್ರದೇಶದ ಖಾಸಗಿ ಶಾಲೆಗಳಲ್ಲಿ ಮಕ್ಕಳಿಗೆ 10 ಗಂಟೆ ಮುಂಚಿತವಾಗಿಯೇ ತರಗತಿಗಳನ್ನು ಆರಂಭ ಮಾಡುತ್ತಿದ್ದಾರೆ. ಈ ವಿಷಯವನ್ನು ಗಮನದಲ್ಲಿಟ್ಟುಕೊಂಡು ಮಾತನಾಡಿರುವ ಡಾ.ಮಂಜುನಾಥ್ ಅವರು, ಮಕ್ಕಳಿಗೆ ಈ ವಯಸ್ಸಿನಲ್ಲಿ ನಿದ್ರೆ ಅತೀ ಮುಖ್ಯ ಎಂದು ಪ್ರತಿಪಾದಿಸಿದ್ದಾರೆ.
5/ 7
ಮಕ್ಕಳ ದೈಹಿಕ, ಮಾನಸಿಕ, ಸಾಮಾಜಿಕ ಆರೋಗ್ಯದ ಬಗ್ಗೆ ಪೋಷಕರು ಹಾಗೂ ಸಮಾಜ ಬಹುಮುಖ್ಯ ಕಾಳಜಿ ವಹಿಸಬೇಕು. ಇತ್ತೀಚಿಗಂತೂ ಮಕ್ಕಳು ಮೊಬೈಲ್, ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿರುತ್ತಾರೆ. ಇದು ಅವರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದರು.
6/ 7
ಮುಂದುವರೆದ ಅವರು, ಕಳೆದ 7 ವರ್ಷಗಳಲ್ಲಿ 6,000 ಯುವಕರಿಗೆ ಹೃದಯ ಚಿಕಿತ್ಸೆಯನ್ನು ಮಾಡಲಾಗಿದೆ. ಇದಕ್ಕೆ ಕಾರಣ ಮಕ್ಕಳು ಚಿಕ್ಕ ವಯಸ್ಸಿನಲ್ಲಿಯೇ ಒತ್ತಡಕ್ಕೆ ಒಳಗಾಗುತ್ತಿರುವುದು ಎಂದು ಹೇಳಿದರು.
7/ 7
ಭಾನುವಾರ ತುಮಕೂರಿನ ಶ್ರೀ ಸಿದ್ದಗಂಗಾ ಮಠದ ಶ್ರೀ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ, ಶ್ರೀ ಸಿದ್ದಗಂಗಾ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘ ಆಯೋಜಿಸಿದ್ದ ಸರ್ವ ಸದಸ್ಯರ 66ನೇ ಮಹಾ ಅಧಿವೇಶನದಲ್ಲಿ ಡಾ.ಸಿ.ಎನ್.ಮಂಜುನಾಥ್ ಅವರು 'ಸಿದ್ಧಗಂಗಾ ಶ್ರೀ ಪ್ರಶಸ್ತಿ' ಸ್ವೀಕರಿಸಿ ಮಾತನಾಡಿದರು.