ಹುಬ್ಬಳ್ಳಿ- ಧಾರವಾಡದಲ್ಲಿ ಜ.12ರಿಂದ 16ವರೆಗೆ ರಾಷ್ಟ್ರೀಯ ಯುವಜನೋತ್ಸವ ನಡೆಯಲಿದೆ. ಯುವಜನೋತ್ಸವಕ್ಕೆ ಬೇರೆ ಬೇರೆ ರಾಜ್ಯಗಳಿಂದ 7,500 ಯುವ ಪ್ರತಿಭೆಗಳ ಆಗಮನವಾಗುತ್ತಿದೆ. ರಜೆ ಅವಧಿ ಸರಿದೂಗಿಸಲು ಶನಿವಾರ ಮತ್ತು ಭಾನುವಾರ ಪೂರ್ಣ ದಿವಸ ಶಾಲೆ ನಡೆಸುವಂತೆ ಆದೇಶ ನೀಡಲಾಗಿದೆ.
ಧಾರವಾಡ : ನಾಳೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಗಮನ ಹಿನ್ನೆಲೆ ಧಾರವಾಡದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.ಹುಬ್ಬಳ್ಳಿ ಧಾರವಾಡದ ನಗರದಲ್ಲಿರೋ 39 ಶಾಲೆಗಳಿಂದ 151ಶಾಲಾ ವಾಹನಗಳ ಬಳಕೆಮಾಡಿಕೊಳ್ಳಲಾಗುತ್ತಿದೆ.
2/ 8
ಹುಬ್ಬಳ್ಳಿ ನಗರದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ವಿದ್ಯಾರ್ಥಿಗಳು ಶಾಲೆಗೆ ಹೋಗುವ ಅವಶ್ಯಕಥೆ ಇಲ್ಲ. ಆಸಕ್ತರು ಯುವಜನೋತ್ಸವದಲ್ಲಿ ಪಾಲ್ಗೊಳ್ಳುವಂತೆ ಸೂಚಿಸಲಾಗಿದೆ.
3/ 8
ಧಾರವಾಡ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಈ ಕುರಿತು ಹೇಳಿಕೆ ನೀಡಿದ್ದಾರೆ. ಪ್ರಧಾನಿ ಅವರು ಬರುತ್ತಿರೋ ಹಿನ್ನೆಲೆ ಟ್ರಾಫಿಕ್ ಜಾಮ್ ಆಗಬಹುದು ಆ ಕಾರಣದಿಂದ ವಿದ್ಯಾರ್ಥಿಗಳಿಗೆ ಶಾಲೆಗೆ ಬರಲು ತೊಂದರೆಯಾಗುತ್ತದೆ ಎಂದು ತಿಳಿಸಿದ್ದಾರೆ.
4/ 8
ಈ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಸಮಸ್ಯೆ ಆಗಬಾರದೆಂದು ರಜೆ ಘೋಷಿಸಲಾಗಿದೆ. ಹುಬ್ಬಳ್ಳಿ ನಗರದ ಶಾಳೆ ಕಾಲೇಜಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದ್ದು ಉಳಿದ ಕಡೆ ಶಲಾ ಕಾಲೇಜುಗಳಿಗೆ ರಜೆ ನೀಡಿಲ್ಲ.
5/ 8
ಕಾರ್ಯಕ್ರಮಕ್ಕೆ ಶಾಲಾ ವಾಹನಗಳನ್ನ ನೀಡುವ ಶಾಲೆಗಳಿಗೂ ರಜೆ ನೀಡಲಾಗಿದೆ. ಈ ಕಾರಣ ಬಸ್ ವ್ಯವಸ್ಥೆ ಇಲ್ಲದಿರುವುದರಿಂದ ಶಾಲೆಗೆ ಬರಲು ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ. ಯುವಜನೋತ್ಸವ ಇರುವ ಕಾರಣ ವಿಶೇಷ ಬಸ್ ವ್ಯವಸ್ಥೆ ಕಲ್ಲಿಸಲಾಗಿದೆ.
6/ 8
ಹುಬ್ಬಳ್ಳಿ- ಧಾರವಾಡದಲ್ಲಿ ಜ.12ರಿಂದ 16ವರೆಗೆ ರಾಷ್ಟ್ರೀಯ ಯುವಜನೋತ್ಸವ ನಡೆಯಲಿದೆ. ಯುವಜನೋತ್ಸವಕ್ಕೆ ಬೇರೆ ಬೇರೆ ರಾಜ್ಯಗಳಿಂದ 7,500 ಯುವ ಪ್ರತಿಭೆಗಳ ಆಗಮನವಾಗುತ್ತಿದೆ. ರಜೆ ಅವಧಿ ಸರಿದೂಗಿಸಲು ಶನಿವಾರ ಮತ್ತು ಭಾನುವಾರ ಪೂರ್ಣ ದಿವಸ ಶಾಲೆ ನಡೆಸುವಂತೆ ಆದೇಶ ನೀಡಲಾಗಿದೆ.
7/ 8
ಬಂದವರಿಗೆ ಸೂಕ್ತ ಸಾರಿಗೆ ವ್ಯವಸ್ಥೆ ಕಲ್ಪಿಸಲು ಶಾಲಾ ಬಸ್ ಗಳ ಅವಶ್ಯಕತೆ ಇದೆ ಆ ಕಾರಣ ರಜೆ ನೀಡಲಾಗಿದೆ. ಹುಬ್ಬಳ್ಳಿ-ಧಾರವಾಡಲ್ಲಿರೋ ವಿವಿಧ 39 ಶಾಲೆಗಳಿಗೆ ಡಿಸಿ ಆದೇಶ ರಜೆ ರಜೆ ಘೋಷಿಸಿದ್ದಾರೆ.
8/ 8
ಜನೆವರಿ 11,12,13 ಹಾಗೂ 16ರಂದು ರಜೆ ಘೋಷಣೆ ಮಾಡಲಾಗಿದೆ. ಇದರಿಂದಾಗಿ ಸಾಲು ಸಾಲು ರಜೆ ವಿದ್ಯಾರ್ಥಿಗಳಿಗೆ ದೊರೆತಿದೆ. ಇದು ಶಾಲಾ ವಾಹನಗಳನ್ನ ನೀಡುವ ಶಾಲೆಗಳಿಗೆ ಮಾತ್ರ ಅನ್ವಯವಾಗಲಿದೆ.