ಈ ಹಿಂದೆ ಮಾನ್ಯತೆ ಸಮಿತಿಯ ಶಿಫಾರಸಿನ ಆಧಾರದ ಮೇಲೆ ಕರ್ನಾಟಕದ ರಾಜ್ಯದ ಪರವಾಗಿ 41 ವಿಷಯಗಳಲ್ಲಿ 2020ರಿಂದ 3 ವರ್ಷದವರೆಗೆ, ವರ್ಷಕ್ಕೆ ಒಂದು ಬಾರಿಯಂತೆ KCET ಪರೀಕ್ಷೆಗಳನ್ನು ನಡೆಸಲು ಯುಜಿಸಿಯು ಮೈಸೂರು ವಿಶ್ವವಿದ್ಯಾಲಯಕ್ಕೆ ಮಾನ್ಯತೆ ನೀಡಿತ್ತು.
2/ 8
ಆದರೆ, ಮೈಸೂರು ವಿಶ್ವವಿದ್ಯಾಲಯದಲ್ಲಿ 2021ರ ಜುಲೈನಲ್ಲಿ ನಡೆದ KCET ಪರೀಕ್ಷೆಯಲ್ಲಿ ಅವ್ಯವಹಾರ ನಡೆದಿದೆ ಎಂದು ತಿಳಿದು ಬಂದಿದೆ ಆ ಕಾರಣದಿಂದ ಈ ಬಾರಿ ಅದನ್ನು ಹಿಂಪಡೆಯಲಾಗಿದೆ.
3/ 8
ಹಾಗೂ ಈ ಪ್ರಕ್ರಿಯೆಗೆ ವಿ.ವಿಯ KCET ಪರೀಕ್ಷೆಯ ಸಂಯೋಜಕರು ಹಾಗೂ ಇತರರು ಸಂಪೂರ್ಣ ಹೊಣೆಗಾರರು ಎಂದು ದೂರುಗಳು ಬಂದಿವೆ. ಈ ಬಗ್ಗೆ ಪ್ರತ್ಯೇಕ ತನಿಖೆಗೆ ಸಮಿತಿ ರಚಿಸಿ ಆದೇಶಿಸಲಾಗಿದೆ.
4/ 8
ಅವ್ಯವಹಾರಗಳು ನಡೆದಲ್ಲಿ ಅರ್ಹತೆ ಇರುವ ಪ್ರತಿಭಾವಂತ ಸಾವಿರಾರು ಅಭ್ಯರ್ಥಿಗಳಿಗೆ ಅನ್ಯಾಯವಾಗುತ್ತದೆ. ಮುಂದಿನ ಯುವ ಪೀಳಿಗೆಗೆ ಗುಣಮಟ್ಟದ ಶೈಕ್ಷಣಿಕ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗುವುದಿಲ್ಲ.
5/ 8
ಆದ್ದರಿಂದ ಪರೀಕ್ಷೆಯಲ್ಲಿ ಪಾರದರ್ಶಕತೆ ಇರಬೇಕು. ಈ ಪರೀಕ್ಷೆಯನ್ನು ಸ್ವತಂತ್ರ ಸಂಸ್ಥೆಯೇ ನಡೆಸುವುದೇ ಸೂಕ್ತವಾಗಿರುತ್ತದೆ ಎಂಬುದನ್ನು ಈಗ ಹೇಳಲಾಗಿದೆ. 2021ರ ಪರೀಕ್ಷೆಯಲ್ಲಿ ಅವ್ಯವಹಾರಗಳ ಹಿನ್ನೆಲೆಯಲ್ಲಿ 2022ನೇ ಸಾಲನ್ನೂ ಒಳಗೊಂಡಂತೆ ಮುಂದಿನ ಆದೇಶದವರೆಗೆ ಕೆಇಒ ಮೂಲಕ ನಡೆಸಲು ನಿರ್ಧರಿಸಲಾಗಿದೆ.
6/ 8
ಉನ್ನತ ಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿ ಶೀತಲ್ ಎಂ.ಹಿರೇಮಠ ಡಿ.17ರಂದು ಹೊರಡಿಸಿರುವ ಆದೇಶದಲ್ಲಿ ಈ ಬಗ್ಗೆ ತಿಳಿಸಿದ್ದಾರೆ.
7/ 8
ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯನ್ನು KCET ಅನ್ನು ಮೈಸೂರು ವಿಶ್ವವಿದ್ಯಾಲಯದ ಬದಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವೇ ನಡೆಸಲು ನಿರ್ಧರಿಸಿದೆ.
8/ 8
KEAದ ಮೂಲಕ ನಡೆಸುವಂತೆ ಉನ್ನತ ಶಿಕ್ಷಣ ಇಲಾಖೆ ಆದೇಶಿಸಿದೆ. ಮೈಸೂರು ವಿಶ್ವವಿದ್ಯಾಲಯದಲ್ಲಿ KCET ಪರೀಕ್ಷೆಯನ್ನು ಅಕ್ರಮವಾಗಿ ನಡೆಸುತ್ತಿದ್ದು, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮೋಸ ಆಗಬಾರದು ಎನ್ನುವ ಕಾರಣದಿಂದ ಈ ನಿರ್ಧಾರಕ್ಕೆ ಬರಲಾಗಿದೆ.