Karate Class: ಇನ್ಮುಂದೆ ಶಾಲೆಗಳಲ್ಲಿ ಯೋಗದ ಜೊತೆಗೆ ಕರಾಟೆ ಕೋರ್ಸ್!
ಕರ್ನಾಟಕ ಸರ್ಕಾರವು ಇತ್ತೀಚಿಗೆ ಶೈಕ್ಷಣಿಕವಾಗಿ ವಿದ್ಯಾರ್ಥಿಗಳ ಸಾಮರ್ಥ್ಯವನ್ನು ಹೆಚ್ಚಿಸುವ ಸಲುವಾಗಿ ಯೋಗದ ಜೊತೆಗೆ ಕರಾಟೆಯನ್ನೂ ಸಹ ಕಲಿಸಬೇಕು ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮುಂದಿನ ಶೈಕ್ಷಣಿಕ ವರ್ಷದಿಂದ ಯೋಗದ ಜೊತೆಗೆ ಹೆಣ್ಣು ಮಕ್ಕಳ ಆತ್ಮರಕ್ಷಣೆಗಾಗಿ ಅಲ್ಪಾವಧಿ ಕೋರ್ಸ್ ಅನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
2/ 8
ಕರ್ನಾಟಕ ಸರ್ಕಾರವು ಇತ್ತೀಚಿಗೆ ಶೈಕ್ಷಣಿಕವಾಗಿ ವಿದ್ಯಾರ್ಥಿಗಳ ಸಾಮರ್ಥ್ಯವನ್ನು ಹೆಚ್ಚಿಸುವ ಸಲುವಾಗಿ ಹಲವಾರು ರೀತಿಯ ಪ್ರಯತ್ನ ಮಾಡುತ್ತಿದೆ ಅದರ ಭಾಗವಾಗಿ ಇಲ್ಲಿ ಹೊಸದೊಂದು ಯೋಜನೆ ತರಲು ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
3/ 8
ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಓಬವ್ವ ಆತ್ಮರಕ್ಷಣಾ ಕರಾಟೆ ಪ್ರದರ್ಶನವನ್ನು ವೀಕ್ಷಿಸಿ ಬೊಮ್ಮಾಯಿ ಅವರು ಮಾತನಾಡುವ ಸಂದರ್ಭದಲ್ಲಿ ಇದನ್ನು ಉಲ್ಲೇಖಿಸಿದ್ಧಾರೆ.
4/ 8
ಆತ್ಮರಕ್ಷಣೆಗಾಗಿ ಈ ಅಲ್ಪಾವಧಿ ಕೋರ್ಸ್ ಅನ್ನು ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಾರಂಭಿಸುವ ಅಗತ್ಯವನ್ನು ಒತ್ತಿ ಹೇಳಿದ ಅವರು ಮುಂದಿನ ಶೈಕ್ಷಣಿಕ ವರ್ಷದಿಂದ ಪಿಯು ಹಂತದವರೆಗೆ ಯೋಗದ ಜೊತೆಗೆ ಕಲಿಸಲಾಗುವುದು ಎಂದು ಹೇಳಿದ್ದಾರೆ.
5/ 8
ಈ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ಪ್ರತಿಯೊಬ್ಬ ನಾಗರಿಕನಿಗೂ ಆತ್ಮರಕ್ಷಣೆ ಅವಶ್ಯ. ಹೆಣ್ಣು ಮಕ್ಕಳ ಆತ್ಮರಕ್ಷಣೆಗಾಗಿ ಕರಾಟೆ ತರಬೇತಿ ಸೇರಿದಂತೆ ಹಲವು ನಿರ್ಧಾರಗಳನ್ನು ಕೈಗೊಳ್ಳಲಾಗುವುದು ಎಂದು ಸೂಚಿಸಿದ್ದಾರೆ.
6/ 8
ಕಳೆದ ದಿನಗಳಲ್ಲಿ ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಈ ತರಬೇತಿ ನೀಡಿರುವುದು ಸಂತಸ ತಂದಿದೆ. ಈ ಆತ್ಮರಕ್ಷಣೆಯ ಕಲೆಯನ್ನು ಕಲಿತವರು ಹೆಣ್ಣು ಮಕ್ಕಳಿಗೆ ಕಲಿಸಬೇಕು ಎಂದು ಬೊಮ್ಮಾಯಿ ಹೇಳಿದರು.
7/ 8
ಉದ್ಯೋಗಿ ಮಹಿಳೆಯರು, ವಿದ್ಯಾರ್ಥಿಗಳು ಮತ್ತು ಇತರರಿಗೆ ಬೋಧನೆ ಮಾಡುವುದು ಉತ್ತಮ ಕ್ರಮವಾಗಿದೆ, ಇದನ್ನು ದೊಡ್ಡ ಪ್ರಮಾಣದಲ್ಲಿ ವಿಸ್ತರಿಸಬಹುದು. ಆತ್ಮರಕ್ಷಣೆಯ ತರಬೇತಿಯನ್ನು ಪಡೆಯುವುದು ಹೆಣ್ಣುಮಕ್ಕಳಿಗೆ ಮಾತ್ರವಲ್ಲದೆ ಸಮಾಜಕ್ಕೂ ಒಳ್ಳೆಯದು.
8/ 8
ವಿದ್ಯಾರ್ಥಿನಿಯರಿಗೆ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಾವು ₹ 700 ಕೋಟಿ ವೆಚ್ಚದಲ್ಲಿ ನಿರ್ಭಯ ಯೋಜನೆಯನ್ನು ಕೈಗೆತ್ತಿಕೊಂಡಿದ್ದೇವೆ ಮತ್ತು ಇದನ್ನು ಎಲ್ಲಾ ನಗರಗಳಿಗೂ ವಿಸ್ತರಿಸಲಾಗುವುದು ಎಂದು ತಿಳಿಸಿದ್ದಾರೆ.