NEP: ಹೊಸ ಶಿಕ್ಷಣ ನೀತಿಯಲ್ಲಿ ಈ ವಿಷಯಗಳನ್ನು ಕಲಿಯುವುದು ಕಡ್ಡಾಯ
ಶಿಕ್ಷಣ ವ್ಯವಸ್ಥೆಯಲ್ಲಿ ಸಮಾಜದ ನಿಜವಾದ ಅಗತ್ಯಗಳೇನು ಎನ್ನುವುದನ್ನು ಪರಿಗಣನೆಗೆ ತೆಗೆದುಕೊಂಡು ಅದರಂತೆ ನಡೆಯಬೇಕು ಎಂದು ಹೇಳಿದ್ದಾರೆ. ಹೊಸ ರಾಷ್ಟೀಯ ಶಿಕ್ಷಣ ನೀತಿ ಅನುಷ್ಠಾನಗೊಳಿಸುವಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದು ಹೇಳಿದ್ದಾರೆ.
ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಹಲವಾರು ಹೊಸತನದೊಂದಿಗೆ ಜಾರಿಯಾಗುತ್ತಿದೆ. ನೂತನ ರಾಷ್ಟ್ರೀಯ ಶಿಕ್ಷಣ ನೀತಿ (NEP) ಯಲ್ಲಿ ಸಾಂಸ್ಕೃತಿಕ ಚಡುವಟಿಕೆಗಳ ಜತೆಗೆ ದೈಹಿಕ ಶಿಕ್ಷಣ, ಡಿಜಿಟಲ್ ಮತ್ತು ಹಣಕಾಸು ಜಾಗೃತಿ ಕಲಿಕೆಗಳನ್ನು ಪ್ರತಿಯೊಬ್ಬ ವಿದ್ಯಾರ್ಥಿಗೂ ಕಡ್ಡಾಯಗೊಳಿಸಲಾಗಿದೆ.
2/ 7
ಇದನ್ನು ಹೊರತು ಪಡಿಸಿ ಸಾಂಸ್ಕೃತಿಕ ಶಿಕ್ಷಣ ಅತ್ಯಗತ್ಯ ಎಂದೂ ಸಹ ತಿಳಿಸಿದ್ದಾರೆ. ಉಳಿದ ವಿಷಯಗಳ ಆಯ್ಕೆಯಲ್ಲಿ ವಿದ್ಯಾರ್ಥಿಗಿಗೆ ಸಂಪೂರ್ಣ ಸ್ವಾತಂತ್ರ್ಯ ಕೊಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವಥ್ ನಾರಾಯಣ ಹೇಳಿದ್ದಾರೆ.
3/ 7
ಬೆಂಗಳೂರಿನ ಮಲ್ಲೇಶ್ವರಂನಲ್ಲಿನ ಸೇವಾ ಸದನದಲ್ಲಿ ಬುಧವಾರ ನಡೆದ ಸಂಗೀತ ಸಂಭ್ರಮ ಸಮಾರಂಭದಲ್ಲಿ ಭಾಗವಹಿಸಿದಾಗ ಅವರು ಈ ಕುರಿತು ಮಾತನಾಡಿದ್ದಾರೆ.ನೂತನ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಯಲ್ಲಿ ನಮ್ಮತನಕ್ಕೆ ಆದ್ಯತೆ ನೀಡಲಾಗಿದೆ ಸಕಾರಾತ್ಮಕ ಬದಲಾವಣೆಯತ್ತ ಸಾಗಲು ಬಯಸುತ್ತಿದ್ದೇವೆ ಎಂದು ಹೇಳಿದ್ದಾರೆ.
4/ 7
ಶಿಕ್ಷಣ ವ್ಯವಸ್ಥೆಯಲ್ಲಿ ಪ್ರಧಾಮಂತ್ರಿ ನರೇಂದ್ರ ಮೋದಿ ಅವರು ತರುತ್ತಿರುವ ಸಕಾರಾತ್ಮಕ ಬದಲಾವಣೆಗಳನ್ನು ರಾಜ್ಯ ಸರ್ಕಾರವು ಅಷ್ಟೇ ಉತ್ಸಾಹ ಮತ್ತು ಬದ್ಧತೆಗಳಿಂದ ಅನುಷ್ಠಾನಗೊಳಿಸಲಿದೆ ಎಂದು ಹೇಳಿದ್ದಾರೆ.
5/ 7
ಶಿಕ್ಷಣ ವ್ಯವಸ್ಥೆಯಲ್ಲಿ ಸಮಾಜದ ನಿಜವಾದ ಅಗತ್ಯಗಳೇನು ಎನ್ನುವುದನ್ನು ಪರಿಗಣನೆಗೆ ತೆಗೆದುಕೊಂಡು ಅದರಂತೆ ನಡೆಯಬೇಕು ಎಂದು ಹೇಳಿದ್ದಾರೆ. ಹೊಸ ರಾಷ್ಟೀಯ ಶಿಕ್ಷಣ ನೀತಿ ಅನುಷ್ಠಾನಗೊಳಿಸುವಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದು ಹೇಳಿದ್ದಾರೆ.
6/ 7
ದೈಹಿಕ ಶಿಕ್ಷಣ, ಡಿಜಿಟಲ್ ಮತ್ತು ಹಣಕಾಸು ಜಾಗೃತಿ ಈ ಅಂಶಗಳು ನಿಜಕ್ಕೂ ವಿದ್ಯಾರ್ಥಿಗಳ ಪಠ್ಯಕ್ರಮದಲ್ಲಿ ಒಂದು ಉಪಯುಕ್ತ ಅಳವಡಿಕೆ ಇವಿಷ್ಟನ್ನು ಖಡ್ಡಾಯಗೊಳಿಸಲಾಗಿದೆ ಎಂದು ಹೇಳಿದ್ದಾರೆ.
7/ 7
ಇನ್ನು ಉಳಿದ ವಿಷಯಗಳ ಆಯ್ಕೆಯನ್ನು ವಿದ್ಯಾರ್ಥಿಗಳಿಗೆ ಬಿಡಲಾಗಿದೆ ಎಂದು ತಿಳಿಸಿದ್ದಾರೆ. ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ನಿಟ್ಟುನಲ್ಲಿ ಎಲ್ಲಾ ರೀತಿಯ ಪ್ರಯತ್ನಗಳೂ ಸಹ ಜರುಗುತ್ತಿದೆ.