Mid Day Meal: ಬಿಸಿ ಊಟದಲ್ಲಿ ಹಲ್ಲಿ ಪತ್ತೆ; 36 ವಿದ್ಯಾರ್ಥಿಗಳು ಅಸ್ವಸ್ಥ!

ಆರೋಗ್ಯ ಸಮಸ್ಯೆಗಳ ಬಗ್ಗೆ ದೂರು ನೀಡಿದ ವಿದ್ಯಾರ್ಥಿಗಳನ್ನು ಸಾಗಿಸಲಾಗಿದ್ದು, ಅವರು ಈಗ ಅಪಾಯದಿಂದ ಪಾರಾಗಿದ್ದಾರೆ. 36 ವಿದ್ಯಾರ್ಥಿಗಳು ಈಗ ಸ್ಥಿರವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ಸದರ್ ಆಸ್ಪತ್ರೆಯ ಡಾ.ಸಂತೋಷ್ ತಿಳಿಸಿದ್ದಾರೆ.

First published:

  • 18

    Mid Day Meal: ಬಿಸಿ ಊಟದಲ್ಲಿ ಹಲ್ಲಿ ಪತ್ತೆ; 36 ವಿದ್ಯಾರ್ಥಿಗಳು ಅಸ್ವಸ್ಥ!

    ಬಿಹಾರದ ಸರನ್ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮಧ್ಯಾಹ್ನದ ಊಟದಲ್ಲಿ ಹಲ್ಲಿ ಬಿದ್ದಿರುವುದಾಗಿ ವರದಿಯಾಗಿದೆ. ಇಲ್ಲಿ ಆಹಾರ ಸೇವನೆ ಮಾಡಿದ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ.

    MORE
    GALLERIES

  • 28

    Mid Day Meal: ಬಿಸಿ ಊಟದಲ್ಲಿ ಹಲ್ಲಿ ಪತ್ತೆ; 36 ವಿದ್ಯಾರ್ಥಿಗಳು ಅಸ್ವಸ್ಥ!

    ವಿದ್ಯಾರ್ಥಿಗಳೆಲ್ಲರೂ ಕೂತು ಊಟ ಮಾಡುತ್ತಿದ್ದ ಸಂದರ್ಭದಲ್ಲಿ ವಿದ್ಯಾರ್ಥಿಯೊಬ್ಬನ ತಟ್ಟೆಯಲ್ಲಿ ಈ ಸತ್ತಿರುವ ಹಲ್ಲಿ ಸಿಕ್ಕಿದೆ. ಇದನ್ನು ವಿದ್ಯಾರ್ಥಿ ಇತರರಿಗೆ ತಿಳಿಸಿದ್ದಾನೆ. ಗುರುವಾರ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದೆ.

    MORE
    GALLERIES

  • 38

    Mid Day Meal: ಬಿಸಿ ಊಟದಲ್ಲಿ ಹಲ್ಲಿ ಪತ್ತೆ; 36 ವಿದ್ಯಾರ್ಥಿಗಳು ಅಸ್ವಸ್ಥ!

    ವಿದ್ಯಾರ್ಥಿಯೊಬ್ಬ ತನ್ನ ತಟ್ಟೆಯಲ್ಲಿ ಹಲ್ಲಿ ಇರುವುದನ್ನು ಕಂಡು ತಕ್ಷಣ ಶಿಕ್ಷಕರಿಗೆ ಮಾಹಿತಿ ನೀಡಿದ್ದಾನೆ. ನಂತರ ಶಾಲೆಯು ಮಧ್ಯಾಹ್ನದ ಊಟವನ್ನು ಸ್ಥಗಿತಗೊಳಿಸಿದ್ದಾರೆ. ಯಾರಿಗೆಲ್ಲಾ ತೊಂದರೆಯಾಗಿದೆಯೋ ಅವರನ್ನುತಕ್ಷಣವೇ ಸದರ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

    MORE
    GALLERIES

  • 48

    Mid Day Meal: ಬಿಸಿ ಊಟದಲ್ಲಿ ಹಲ್ಲಿ ಪತ್ತೆ; 36 ವಿದ್ಯಾರ್ಥಿಗಳು ಅಸ್ವಸ್ಥ!

    ಆರೋಗ್ಯ ಸಮಸ್ಯೆಗಳ ಬಗ್ಗೆ ದೂರು ನೀಡಿದ ವಿದ್ಯಾರ್ಥಿಗಳನ್ನು ಸಾಗಿಸಲಾಗಿದ್ದು, ಅವರು ಈಗ ಅಪಾಯದಿಂದ ಪಾರಾಗಿದ್ದಾರೆ. 36 ವಿದ್ಯಾರ್ಥಿಗಳು ಈಗ ಸ್ಥಿರವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ಸದರ್ ಆಸ್ಪತ್ರೆಯ ಡಾ.ಸಂತೋಷ್ ತಿಳಿಸಿದ್ದಾರೆ.

    MORE
    GALLERIES

  • 58

    Mid Day Meal: ಬಿಸಿ ಊಟದಲ್ಲಿ ಹಲ್ಲಿ ಪತ್ತೆ; 36 ವಿದ್ಯಾರ್ಥಿಗಳು ಅಸ್ವಸ್ಥ!

    ಇದೇ ವೇಳೆ ಘಟನೆ ಕುರಿತು ಸರಕಾರಿ ಶಾಲೆಯಲ್ಲಿ ಜಿಲ್ಲಾಡಳಿತಕ್ಕೆ ಮಾಹಿತಿ ಲಭಿಸಿದೆ. ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಸಂಜಯ್ ಕುಮಾರ್ ರೈ ಅವರು ವಿದ್ಯಾರ್ಥಿಗಳ ಸ್ಥಿತಿಯನ್ನು ತಿಳಿಯಲು ಆಸ್ಪತ್ರೆಗೆ ತೆರಳಿದ್ದಾರೆ.

    MORE
    GALLERIES

  • 68

    Mid Day Meal: ಬಿಸಿ ಊಟದಲ್ಲಿ ಹಲ್ಲಿ ಪತ್ತೆ; 36 ವಿದ್ಯಾರ್ಥಿಗಳು ಅಸ್ವಸ್ಥ!

    ನಲವತ್ತು ವಿದ್ಯಾರ್ಥಿಗಳು ಮಧ್ಯಾಹ್ನದ ಊಟವನ್ನು ಸೇವಿಸಿದ್ದಾರೆ, ಅದರಲ್ಲಿ 36 ಮಂದಿ ಅಸ್ವಸ್ಥರಾಗಿದ್ದಾರೆ. ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಆಹಾರ ಸರಬರಾಜು ಮಾಡುವ ಎನ್‌ಜಿಒ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಡಿಎಂ ಸದಸ್ಯರು ಹೇಳಿದ್ದಾರೆ.

    MORE
    GALLERIES

  • 78

    Mid Day Meal: ಬಿಸಿ ಊಟದಲ್ಲಿ ಹಲ್ಲಿ ಪತ್ತೆ; 36 ವಿದ್ಯಾರ್ಥಿಗಳು ಅಸ್ವಸ್ಥ!

    ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಿ ಸುಮನ್‌ಕುಮಾರಿ ಮಾತನಾಡಿ, ‘ವಿದ್ಯಾರ್ಥಿಗಳಿಗೆ ನೀಡಲಿರುವ ಮಧ್ಯಾಹ್ನದ ಊಟಕ್ಕೆ ಎನ್‌ಜಿಒ ಆಹಾರ ತಂದಿದ್ದು, ತಟ್ಟೆಯಲ್ಲಿ ಹಲ್ಲಿ ಪತ್ತೆಯಾಗಿದೆ ಎಂದು ಒಬ್ಬ ವಿದ್ಯಾರ್ಥಿ ಮಾಹಿತಿ ನೀಡಿದ್ದಾನೆ ಎಂದು ತಿಳಿಸಿದ್ದಾರೆ.

    MORE
    GALLERIES

  • 88

    Mid Day Meal: ಬಿಸಿ ಊಟದಲ್ಲಿ ಹಲ್ಲಿ ಪತ್ತೆ; 36 ವಿದ್ಯಾರ್ಥಿಗಳು ಅಸ್ವಸ್ಥ!

    ಜುಲೈ 16, 2013 ರಂದು, ಸರನ್ ಜಿಲ್ಲೆಯ ಮಶ್ರಖ್‌ನ ಪ್ರಾಥಮಿಕ ಶಾಲೆಯಲ್ಲಿ ಕೀಟನಾಶಕದಿಂದ ಮಧ್ಯಾಹ್ನದ ಬಿಸಿ ಊಟ ಹಾಳಾಗಿತ್ತು. 

    MORE
    GALLERIES