ಈ ವರ್ಷ, ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET) ಸಂದರ್ಭದಲ್ಲಿ ಮತ್ತೊಮ್ಮೆ ಒಳ ಉಡುಪಿನ ವಿವಾದ ಸ್ಫೋಟಗೊಂಡಿದೆ. ಕೆಲವು ವಿದ್ಯಾರ್ಥಿನಿಯರಿಗೆ ಭಾನುವಾರ ವೈದ್ಯಕೀಯ ಪ್ರವೇಶ ಪರೀಕ್ಷಾ ಕೇಂದ್ರವನ್ನು ಪ್ರವೇಶಿಸುವ ಮೊದಲು ಸಿಬ್ಬಂದಿಗಳು ಒಳ ಉಡುಪು ತೆಗೆಯುವಂತೆ ಹೇಳಿದ್ದಾರೆ. ಹೌದು, ಇದೊಂದು ಶಾಕಿಂಗ್ ವಿಚಾರವಾಗಿದ್ದು, ನೀಟ್ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿಯರು ಬೇಸರ ವ್ಯಕ್ತಪಡಿಸಿದ್ದಾರೆ.