1) ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (NLSIU): ಇದು ಬೆಂಗಳೂರಿನಲ್ಲಿ 1986 ರಲ್ಲಿ ಅಸ್ತಿತ್ವಕ್ಕೆ ಬಂದಿತು. ಇದು ಭಾರತದ ಮೊದಲ ಪ್ರಧಾನ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳಲ್ಲಿ ಒಂದಾಗಿದೆ. ಜಗತ್ತಿನಾದ್ಯಂತ ಕಾನೂನು ಸಂಶೋಧನೆ ಮತ್ತು ಅಧ್ಯಯನಗಳ ಅತ್ಯುತ್ತಮ ಸಂಸ್ಥೆಗಳಲ್ಲಿ ಒಂದಾಗಿದೆ. ನಾಗರಭಾವಿಯಲ್ಲಿರುವ ಕಾನೂನು ಶಾಲೆಯ ಕ್ಯಾಂಪಸ್ ನಗರ ರೈಲು ನಿಲ್ದಾಣದಿಂದ ಸುಮಾರು 10 ಕಿ.ಮೀ ದೂರದಲ್ಲಿದೆ. ಇದು ಇಪ್ಪತ್ತಮೂರು ಎಕರೆ ವಿಸ್ತೀರ್ಣವನ್ನು ಹೊಂದಿದೆ.
5) ಗುಜರಾತ್ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯ (GNLU): 2003ರಲ್ಲಿ ಗುಜರಾತ್ ಸರ್ಕಾರದಿಂದ ಸ್ಥಾಪಿಸಲಾಗಿದೆ. ವಿಶ್ವವಿದ್ಯಾನಿಲಯವನ್ನು ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ಮತ್ತು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಗುರುತಿಸಿದೆ. ಗುಜರಾತ್ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯವು ಗುಜರಾತ್ ನಲ್ಲಿ ಕಾನೂನು ಶಿಕ್ಷಣದ ಉನ್ನತಿಗಾಗಿ ನೋಡಲ್ ಏಜೆನ್ಸಿಯಾಗಿ ಕಾರ್ಯನಿರ್ವಹಿಸುತ್ತಿದೆ.