BMTC Recruitment 2023: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(Bengaluru Metropolitan City Corporation)ಯಲ್ಲಿ ಹಲವು ಹುದ್ದೆಗಳು ಖಾಲಿ ಇದ್ದು, ಉದ್ಯೋಗಾಂಕ್ಷಿಗಳು(Jobseekers) ಅರ್ಜಿ ಸಲ್ಲಿಸಬಹುದಾಗಿದೆ. ಒಟ್ಟು 636 ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, SSLC, ಐಟಿಐ, ಡಿಪ್ಲೊಮಾ ಪಾಸಾಗಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆಫ್ಲೈನ್/ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಬೇಕು. ಇದೇ ಮಾರ್ಚ್ 15, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ(Last Date). ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್(Official Website)ಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ. ಮೆರಿಟ್ ಲಿಸ್ಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.