KAPL Recruitment 2023: ಕರ್ನಾಟಕ ಆ್ಯಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್(Karnataka Antibiotics and Pharmaceuticals Limited) ನಲ್ಲಿ ಅನೇಕ ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 25 ಆಯುಷ್ ಸರ್ವೀಸ್ ರೆಪ್ರೆಸೆಂಟೇಟಿವ್ಸ್, ಏರಿಯಾ ಮ್ಯಾನೇಜರ್ ಹುದ್ದೆಗಳು ಖಾಲಿ ಇವೆ. ಅರ್ಹ ಅಭ್ಯರ್ಥಿಗಳು KAPLನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಏಪ್ರಿಲ್ 15ರೊಳಗೆ ಆಫ್ಲೈನ್(Offline) ಮೂಲಕ ಅರ್ಜಿ ಸಲ್ಲಿಸಬೇಕು. ಪದವೀಧರರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.