Karnataka High Court Recruitment 2023: ಕರ್ನಾಟಕ ಹೈ ಕೋರ್ಟ್ (Karnataka High Court )ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 13 ಲಾ ಕ್ಲರ್ಕ್ & ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ(Bengaluru) ಪೋಸ್ಟಿಂಗ್ ನೀಡಲಾಗುತ್ತದೆ. ಆಸಕ್ತರು ಆನ್ಲೈನ್ (Online)ಮೂಲಕ ಅರ್ಜಿ ಸಲ್ಲಿಸಬೇಕು. ಇದೇ ಫೆಬ್ರವರಿ 25, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ(Last Date)ವಾಗಿದೆ. ಆಸಕ್ತರು ತಡಮಾಡದೇ ಈ ಕೂಡಲೇ ಅರ್ಜಿ ಹಾಕಿ.